ಬೆಂಗಳೂರು: ಕೇರಳದ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್ ಅವರ ವಿರುದ್ಧ ಬೆಂಗಳೂರಿನ ಐಟಿ ಕಂಪನಿ ಎಕ್ಸಾಲಜಿಕ್ ಸಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಕೊಚ್ಚಿನ್ ಮಿನರಲ್ಸ್ – ರುಟೈಲ್ ಲಿಮಿಟೆಡ್ ನಡುವಿನ ಆರ್ಥಿಕ ವಹಿವಾಟುಗಳ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಗೊಳಿಸಿದೆ.
ವೀಣಾ ತಮ್ಮ ವಿರುದ್ಧ ಗಂಭೀರ ವಂಚನೆಗಳ ತನಿಖಾ ಕಚೇರಿಯ (ಎಸ್ಎಫ್ಐಒ) ತನಿಖೆಗೆ ಆದೇಶಿಸಿದ್ದ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪುತ್ರಿ ವೀಣಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ ಎಂದು ತಿಳಿದುಬಂದಿದೆ.
ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಎಕ್ಸಾಲಜಿಕ್ ಸಲ್ಯೂಷನ್ಸ್ ಕಂಪನಿಯ ನಿರ್ದೇಶಕಿ ವೀಣಾ ಪಿಣರಾಯಿ ವಿಜಯನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯ ಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ಶುಕ್ರವಾರ ಪ್ರಕಟಿಸಿದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಎರಡೂ ಕಂಪನಿಗಳ ನಡುವಿನ ಆರ್ಥಿಕ ವ್ಯವಹಾರದ ಮಾಹಿತಿ ನೀಡದಿರುವುದು ವಂಚನೆಯಾಗುವುದಿಲ್ಲ. ಯಾವುದೇ ಅಪರಾಧ ಎಸಗದಿದ್ದರೂ ಅರ್ಜಿದಾರರ ವಿರುದ್ಧ ಎಸ್ಎಫ್ಓ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿರುವುದು ಕಾನೂನು ಬಾಹಿರ ಕ್ರಮವಾಗಿದೆ ಎಂದು ವಾದಿಸಿದ್ದರು.