ಬೆಂಗಳೂರು : ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ, ವಿ ಎಸ್ ಪುಷ್ಪ ಮಾಹಿತಿ ನೀಡಿರುವ ಪ್ರಕಾರ ಮೇ 31ರವರೆಗೆ HSRP ನಂಬರ್ ಅಳವಡಿಕೆಗೆ ಅವಕಾಶ ನೀಡಿ ಗಡವು ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ವಿಷಯದ ಬಗ್ಗೆ ಸದನದಲ್ಲಿ ಸಾರಿಗೆ ಸಚಿವರು ಮಾಹಿತಿ ನೀಡಿದ್ದರು. ಗಡವು ವಿಸ್ತರಣೆ ಮಾಡಿ ರಾಜ್ಯ ಸಾರಿಗೆ ಇಲಾಖೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎನ್ನಲಾಗುತ್ತಿದೆ.ನಂಬರ್ ಪ್ಲೇಟ್ ಅಳವಡಿಕೆಗೆ ಫೆಬ್ರವರಿ 17 ರ ಡೆಡ್‌ಲೈನ್ ನೀಡಲಾಗಿತ್ತು. ಆದರೆ ಜಿಲ್ಲೆ ಜಿಲ್ಲೆಗಳಲ್ಲೂ ಈ ಪ್ಲೇಟ್ ಅಳವಡಿಕೆ ಆಗಿಲ್ಲ. ಇನ್ನೂ ಒಂದೂವರೆ ಕೋಟಿಗೂ ಹೆಚ್ಚು ವಾಹನಗಳಿಗೆ ಈ ಪ್ಲೇಟ್ ಅಳವಡಿಕೆ ಆಗಬೇಕಿದೆ ಎಂದು ಕಾಂಗ್ರೆಸ್‌ನ ಪರಿಷತ್ ಸದಸ್ಯ ಮಧು ಮಾದೇಗೌಡ ಸದನದಲ್ಲಿ ಪ್ರಸ್ತಾಪಿಸಿದ್ದರು.
ಮಧು ಮಾದೇಗೌಡ ಪ್ರಶ್ನೆಗೆ ಉತ್ತರಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ರಾಜ್ಯದಲ್ಲಿ ಸದ್ಯ 18 ಲಕ್ಷ ವಾಹನಗಳಿಗೆ ಮಾತ್ರ ಈ ಪ್ಲೇಟ್ ಅಳವಡಿಕೆ ಆಗಿದೆ. ಇನ್ನೂ ಒಂದು ಕೋಟಿ 82 ಲಕ್ಷ ವಾಹನಗಳಿಗೆ ಈ ಪ್ಲೇಟ್ ಅಳವಡಿಸಬೇಕಿದೆ. ಹೀಗಾಗಿ 3 ತಿಂಗಳ ವರೆಗೆ ಗಡುವು ವಿಸ್ತರಣೆ ಮಾಡುತ್ತೇವೆ ಎಂದು ಹೇಳಿದ್ದರು.
ಇದೀಗ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ (HSRP) ನಂಬರ್ ಪ್ಲೇಟ್ ಅಳವಡಿಸುವ ಅವಧಿಯನ್ನು ನಾಳೆಯಿಂದ ಮೇ 31ರ ವರೆಗೆ ಅಂದರೆ ಮೂರು ತಿಂಗಳು ವಿಸ್ತರಿಸಲಾಗಿದೆ.