ತಮಿಳುನಾಡು: ಇಂದು ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಈ ಘಟನೆಯಲ್ಲಿ ಈವರೆಗೆ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ.
ತಮಿಳುನಾಡಿ ವಿರುದುನಗರದಲ್ಲಿರುವಂತ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ಪಟಾಕಿ ಕಾರ್ಖಾನೆಯಲ್ಲಿ ಉಂಟಾದಂತ ಸ್ಪೋಟದಿಂದಾಗಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಇನ್ನೂ ಸ್ಪೋಟದಿಂದ ಕಾರ್ಖಾನೆ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬಾಲರಾಮನಿಗೆ ಪ್ರತಿದಿನ ಒಂದು ಗಂಟೆ ವಿಶ್ರಾಂತಿ:ಇನ್ನುಂದೆ ಈ ಅವಧಿಯಲ್ಲಿ ‘ರಾಮಮಂದಿರ’ ಬಂದ್