ವಿಜಯನಗರ: ಜಿಲ್ಲೆಯಲ್ಲಿ ಕೌಟುಂಬಿಕ ಕಲಬದಿದಂ ಬೇಸತ್ತು ತಂದೆಯೊಬ್ಬ ಮಕ್ಕಳಿಗೆ ವಿಷ ಕುಡಿಸಿ, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಂಚೋಬನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಬದಿಂದ ಬೇಸತ್ತಂತ ಮಾರಪ್ಪ ಎಂಬುವರು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಈ ವಿಷಯ ತಿಳಿದಂತ ಸ್ಥಳೀಯರು ಅವರನ್ನು ಕೂಡಲೇ ಕೂಡ್ಲಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವಿಷ ಸೇವಿಸಿದಂತ ಮೂವರಲ್ಲಿ ಮಾರಪ್ಪ ಆರೋಗ್ಯ ಸ್ಥಿತಿ ಗಂಭೀರಗೊಂಡಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ನಾನು ಲೋಕಸಭಾ ಚುನಾವಣೆಗೆ ನಿಲ್ಲೋದಿಲ್ಲ – ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟನೆ