ಮಂಗಳೂರು : ಈ ಬಾರಿಯ ಬಜೆಟ್ ಗಾತ್ರ 3 ಲಕ್ಷ 71 ಸಾವಿರ ಕೋಟಿ ರೂಪಾಯಿ. ಇದರಲ್ಲಿ ಅಲ್ಪಸಂಖ್ಯಾತರಿಗೆ ನೀಡಿದ್ದು 3,000 ಕೋಟಿ ರೂಪಾಯಿ. ಅಲ್ಪಸಂಖ್ಯಾತರ ಜನಸಂಖ್ಯೆ ರಾಜ್ಯದಲ್ಲಿ ಶೇ.14ರಷ್ಟಿದೆ. ಆದರೆ, ಅವರಿಗೆ ಬಜೆಟ್ನಲ್ಲಿ ಕೊಟ್ಟಿದ್ದು ಶೇಕಡಾ 0.8ರಷ್ಟು ಮಾತ್ರ, ಇದು ಜಾಸ್ತಿಯಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.
ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ ಕೊಟ್ಟಿದ್ದು ಕೇವಲ 0.8ರಷ್ಟು ಮಾತ್ರ ಎಂದು 2024-25ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತರಿಗೆ ಕೊಡುಗೆ ಜಾಸ್ತಿ ನೀಡಲಾಗಿದೆ ಎಂಬ ಆರೋಪಕ್ಕೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿದರು.
ಅಲ್ಪಸಂಖ್ಯಾತರಿಗೆ ಬಜೆಟ್ನಲ್ಲಿ ಜಾಸ್ತಿ ಹಣ ಮೀಸಲಿಟ್ಟ ಆರೋಪದಲ್ಲಿ ಬಿಜೆಪಿ ಅವರು ನನ್ನ ಎದುರು ಕಪ್ಪು ಬಾವುಟ ಪ್ರದರ್ಶನ ಮಾಡಿಲ್ಲ. ಬೇರೆಯವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿರಬೇಕು. ಅವರಿಗೆ ಬೇರೆ ಸಮುದಾಯದವರನ್ನು ಕಂಡರೆ ಆಗಲ್ಲ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳಿ ಹೀಗೆ ಮಾಡ್ತಾರೆ ಎಂದು ಸಿಎಂ ಕಿಡಿಕಾರಿದರು.
ಮೆಟ್ರೊ ಸಂಪರ್ಕ ಕಲ್ಪಿಸುವ ಮೂಲಕ ‘ಸ್ಯಾಟಲೈಟ್ ಟೌನ್‌ಗಳ’ ಅಭಿವೃದ್ಧಿ: ಸಿಎಂ ಸಿದ್ದರಾಮಯ್ಯ
ರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ, ಕರಾವಳಿ ಕರ್ನಾಟಕ ಗೆಲ್ಲುವ ಭರವಸೆ ಇದೆ: ಡಿಕೆ ಶಿವಕುಮಾರ್
ಒಂದೇ ದಿನದಲ್ಲಿ 50 ಸಾವಿರಕ್ಕೂ ಅಧಿಕ ‘ಟ್ರಾಫಿಕ್ ದಂಡ’: 85 ವಾಹನಗಳನ್ನು ಜಪ್ತಿ ಮಾಡಿದ ಬೆಂಗಳೂರು ಪೊಲೀಸರು