ಮಂಗಳೂರು : ರಾಜಕೀಯ ಪಕ್ಷಗಳ ನಿಧಿಯ ಬಗ್ಗೆ ಮಾಹಿತಿ ಅತ್ಯಗತ್ಯವಾಗಿದ್ದು ಚುನಾವಣಾ ಬಾಂಡ್ ಅಸಂವಿಧಾನಿಕ ಎಂದು ಸುಪ್ರೀಂಕೋರ್ಟ್ ಇತ್ತೀಚಿಗೆ ಮಹತ್ವದ ತೀರ್ಪು ನೀಡಿತ್ತು.ಇದೀಗ ಬಿಜೆಪಿ 6 ಸಾವಿರ ಕೋಟಿ ರು. ಚುನಾವಣಾ ಬಾಂಡ್ ಗಳನ್ನು ಕಾಳಧನಿಕರಿಂದ ಪಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.
ಇದು ಜಿಂದಾಬಾದ್ ಕೂಗುವ ಕಾರ್ಯಕ್ರಮವಲ್ಲ : ಕೈ ಕಾರ್ಯಕರ್ತರ ಘೋಷಣೆಗೆ ಕಿಡಿ ಕಾರಿದ ಶಾಸಕ ಮುನಿರತ್ನ
ಮಂಗಳೂರಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮದ್ದೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಆಕೌಂಟ್‌ಗಳನ್ನು ಜಪ್ತಿ ಮಾಡಿದರು. ತೀವ್ರ ವಿರೋಧ ಬಂದ ಮೇಲೆ ರಿಲೀಸ್ ಮಾಡಿದರು. ಆದರೆ, ಬಿಜೆಪಿ 6 ಸಾವಿರ ಕೋಟಿ ಬಾಂಡ್‌ಗಳನ್ನು ಕಾಳಧನಿಕರಿಂದ ಪಡೆದಿದೆ. ಇತ್ತ ಜನರಿಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಮಗೆ ಬುದ್ದಿ ಹೇಳ್ತೀರಾ ಎಂದು ಖರ್ಗೆ ಪ್ರಶ್ನಿಸಿದರು.
ಕಾಂಗ್ರೆಸ್ ಇದ್ದ ಕಾರಣ ಸಂವಿಧಾನ ಬಂದ ಮೇಲೆ ಮಹಿಳೆಯರಿಗೆ ಓಟಿನ ಅಧಿಕಾರ ಸಿಕ್ಕಿದೆ. ನಮ್ಮ ದೇಶದಲ್ಲಿ ಈ ಕಾನೂನು ಜಾರಿ ಮಾಡಿದ ಮೇಲೆ ಇತರ ದೇಶಗಳೂ ಮಹಿಳೆಯರಿಗೆ ಓಟಿನ ಅಧಿಕಾರ ನೀಡಿವೆ. ಅವರ ತತ್ವದ ಪ್ರಕಾರ ಆಗಿದ್ದರೆ ಎಲ್ಲೆಡೆ ಮನುಸ್ಮೃತಿ ಜಾರಿಯಾಗುತ್ತಿತ್ತು. ಹೆಣ್ಮಕ್ಕಳಿಗೆ ಯಾವುದೇ ಸ್ಥಾನಮಾನ ಸಿಗುತ್ತಿರಲಿಲ್ಲ ಎಂದು ಆರೋಪಿಸಿದರು.
ಲೋಕಸಭಾ ಚುನಾವಣೆಗೆ ಸಿಎಂ ಡಿಸಿಎಂ ಸ್ಪರ್ಧೆ ವಿಚಾರ : HC ಮಹದೇವಪ್ಪ ಹೇಳಿಕೆಗೆ ಡಿಕೆ ಬ್ರದರ್ಸ್ ಹೇಳಿದ್ದೇನು?
ಇನ್ನು 2-3 ವರ್ಷದಲ್ಲಿ ಪ್ರಧಾನಿ ಮೋದಿಯನ್ನು ಕೊಲ್ತೇವೆ: ಸಿಖ್ ರೈತನ ಧಮ್ಕಿ | Watch Video