ಬೆಂಗಳೂರೂ: 2023-24 ನೇ ಸಾಲಿನಲ್ಲಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಕಾರ್ಯಕ್ರಮ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಕಾರ್ಯಕ್ರಮದಡಿ ವಿದ್ಯಾರ್ಥಿವೇತನ ಪಡೆಯಲು ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯವು ರೂ. 2.50 ಲಕ್ಷ ಮೀರಿರಬಾರದು ಎಂಬ ಷರತ್ತನ್ನು ವಿಧಿಸಿರುವುದರಿಂದ ಸಾಮಾನ್ಯ ವರ್ಗದಡಿ ಬರುವ ರೈತರ ಮಕ್ಕಳು ತಮ್ಮ ಪೋಷಕರ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ (ಎಸ್‍ಎಸ್‍ಪಿ) ರವರಿಗೆ ಫೆಬ್ರವರಿ 29 ರೊಳಗೆ ಸಲ್ಲಿಸಬೇಕೆಂದು ಕೃಷಿ ಇಲಾಖೆ ಅಧಿಕೃತ ಪ್ರಕಟಣೆ ತಿಳಿಸಿದೆ.
ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳಿಂದ ಸಂಭವಿಸುತ್ತಿರುವ ಸಾವು- ನೋವು ತಡೆಗಟ್ಟಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆನೆ ಮತ್ತು ಚಿರತೆ ಕಾರ್ಯಪಡೆಗಳ ಬಲವರ್ಧನೆಗೆ 40 ಕೋಟಿ ರೂ. ಮೀಸಲಿಟ್ಟಿದ್ದಾರೆ. ಹಾಗೆಯೇ, ಬಂಡೀಪುರದಲ್ಲಿ ಹೊಸ ಕಾರ್ಯಪಡೆ ರಚನೆ, ಹೆಚ್ಚುವರಿ ಮಾನವ ಸಂಪನ್ಮೂಲ ಹಾಗೂ ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲಪಡಿಸಲು 10 ಕೋಟಿ ರೂ. ಹಂಚಿಕೆ ಮಾಡಲಾಗಿದೆ. ಮಾನವ ವನ್ಯಜೀವಿ ಸಂಘರ್ಷ ತಡೆಗೆ ಬ್ಯಾರಿಕೇಡ್‌ಗಳ ನಿರ್ಮಾಣ ಮಾಡಲಾಗುತ್ತಿದೆ.