ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದ್ದು, ಇದೇ ವೇಳೆ ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ ಎನ್ನಲಾಗಿದೆ.
ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ ಮಾಡುವ ಬಗ್ಗೆ ನಿನ್ನೆ ನಡೆದ ಸಭೆಯಲ್ಲಿ ಪೂಜಾರಿ ಎ.ಜ್ಞಾನೇಂದ್ರ ಅವರನ್ನು ಕರಗ ಹೊರಲು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ. ‘ಕರಗ’ ಎಂಬ ಹೆಸರು ಹೂವಿನ ದಿಂಡು ಮತ್ತು ದೇವಿಯ ವಿಗ್ರಹವನ್ನು ಹೊಂದಿರುವ ಕಲಶದ ಅನುರೂಪವಾಗಿದೆ. ಕರಗವನ್ನು ಮುಟ್ಟದೆ ಅಂದರೆ ಹೂವಿನ ದಿಂಡಿನಿಂದ ಅಲಂಕೃತಗೊಂಡ ಮಣ್ಣಿನ ಮಡಿಕೆ ಅದರಲ್ಲಿರುವ ಕಲಶವನ್ನು ಕೈಯಲ್ಲಿ ಮುಟ್ಟದೆ ಆ ಕಲಶವನ್ನು ಹೊರುವ ವ್ಯಕ್ತಿಯ ತಲೆ ಮೇಲೆ ಇಡಲಾಗುತ್ತದೆ. ಕರಗವನ್ನು ಹೊರುವವನು ಮಹಿಳೆಯಂತೆ ಕಂಕಣ, ಮಂಗಳ-ಸೂತ್ರ ಮತ್ತು ಹಣೆಯ ಮೇಲೆ ಸಿಂಧೂರವನ್ನು ಇಟ್ಟುಕೊಂಡಿರುತ್ತಾನೆ. ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ನಾವು ಕರಗ ಉತ್ಸವದ ಉಲ್ಲೇಖವನ್ನು ಗುರುತಿಸಬಹುದಾಗಿದೆ. ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ ಮತ್ತು ಅವಳನ್ನು ಶಕ್ತಿ ದೇವತೆ ಎಂದು ಗೌರವಿಸುತ್ತದೆ.
BIGG NEWS: ಮತ್ತೆ ವಿವಾದದಲ್ಲಿ ‘ರಾಜ್ಯ’ ಸರ್ಕಾರ! ‘ಕೈಮುಗಿದು’ ಒಳಗೆ ಬನ್ನಿ ಬರಹಕ್ಕೆ ‘ಕೊಕ್’ , ಹೆಚ್ಚಿದ ಆಕ್ರೋಶ!
ಅಂಕೋಲಾ ನಾಡಿನ ಖ್ಯಾತ ಸಾಹಿತಿ, ಪ್ರಕಾಶಕ, ನಾಟಕಕಾರ ವಿಷ್ಣು ನಾಯ್ಕ ನಿಧನ