ಬೆಂಗಳೂರು : ವಿಜಯಪುರ ಜಿಲ್ಲೆಯ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ‘ಜ್ಞಾನ ದೇಗುಲವಿದು, ಕೈ ಮುಗಿದು ಒಳಗೆ ಬಾ’ ಎಂಬ ಬರಹಕ್ಕೆ ಬದಲಾಗಿ, ‘ಜ್ಞಾನ ದೇಗುಲವಿದು, ದೈರ್ಯವಾಗಿ ಪ್ರಶ್ನಿಸಿ’ ಎಂದು ಬರೆಯಿಸಲಾಗಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ವಿಧಾನಸಭೆಯಲ್ಲಿ ಬಿಜೆಪಿ ಪ್ರಸ್ತಾಪಿಸಲು ಸಜ್ಜಾಗಿದೆ.
ಹೌದು ವಿಜಯಪುರ ವಸತಿ ಶಾಲೆಗಳ ಪ್ರವೇಶ ದ್ವಾರಗಳಲ್ಲಿ ಕುವೆಂಪು ಅವರ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬಾ ಎನ್ನುವ ಘೋಷವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯದಿಂದ ಪ್ರಶ್ನಿಸಿ ಬರಹದೊಂದಿಗೆ ಬದಲಾವಣೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಇದೀಗ ಬಿಜೆಪಿಗೆ ವಾಗ್ದಾಳಿ ನಡೆಸಲು ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ.ಇಂದು ಶೂನ್ಯ ವೇಳೆಯಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಈ ವಿಷಯವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನೆ ಹಿನ್ನೆಲೆ?
ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆ ವಿಚಾರವಾಗಿ ಒಂದು ಸುತ್ತೋಲೆ ಹೊರಡಿಸಿ ಅದಿನ್ನೇನು ವಿವಾದ ಆಗುತ್ತಿದ್ದಂತೆಯೇ ವಾಪಸ್ ಪಡೆದಿದ್ದ ಸರ್ಕಾರ ಇದೀಗ ಮತ್ತೊಂದು ಯಡವಟ್ಟು ಮಾಡಿಕೊಳ್ಳಲು ಮುಂದಾಗಿದೆಯಾ ಎಂಬ ಅನುಮಾನ ಸೃಷ್ಟಿಯಾಗಿದೆ’ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾದ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಜಿಪುರದ ಮೊರಾರ್ಜಿ ವಸತಿ ಶಾಲೆಯಲ್ಲಿ ನಡೆದಿದೆ.
ಹೌದು ಮೋರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹ ಬದಲಾಗಿದೆ. ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬರಹಕ್ಕೆ ಕೊಕ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ. ಗೋಡೆ ಬರಹದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಬರಬರಹಗಳಿಗೆ ಬದಲಾವಣೆ ರೂಪ ನೀಡಲಾಗಿದೆ.ಜ್ಞಾನ ದೇಗೆಲುವಿದು ಕೈಮುಗಿದು ಒಳಗೆ ಬಾ ಸಾಲಿಗೆ ಬ್ರೇಕ್ ಹಾಕಲಾಗಿದೆ ಎಂದು ತಿಳಿದು ಬಂದಿದೆ.ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂಬ ಬರಹ ಮುದ್ದೇಬಿಹಾಳ ತಾಲೂಕಿನ ಘಾಜಿಪೂರಿಯ ಶಾಲೆ ಹಾಗೂ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹ ಬದಲಾಗಿದೆ. ಈ ಮೂಲಕ ಅವರ ಬರಹಕ್ಕೆ ಅವಮಾನಿಸಲಾಗಿದೆ ಎಂದು ಹೇಳಲಾಗುತ್ತಿದೆ.ಈ ಕುರಿತು ತನಿಖೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಂಕೋಲಾ ನಾಡಿನ ಖ್ಯಾತ ಸಾಹಿತಿ, ಪ್ರಕಾಶಕ, ನಾಟಕಕಾರ ವಿಷ್ಣು ನಾಯ್ಕ ನಿಧನ
ರಾಜ್ಯ ಸರ್ಕಾರದ ಸುತ್ತೋಲೆ ಪ್ರಕಾರ ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ ಎಂದು ಬರಹ ಬದಲಾವಣೆ ಮಾಡಲಾಗಿದೆ. ಮೊರಾರ್ಜಿ ವಸತಿ ಶಾಲಾ ವಿದ್ಯಾರ್ಥಿಗಳ ಪೋಷಕರು ಧೈರ್ಯವಾಗಿ ಪ್ರಶ್ನೆ ಮಾಡಲಿ. ಮಕ್ಕಳ ಶಿಕ್ಷಣ, ವಸತಿ, ಊಟ ಸೇರಿದಂತೆ ವಸತಿ ಶಾಲೆಯ ಎಲ್ಲಾ ವಿಚಾರಗಳ ಕುರಿತು ಪ್ರಶ್ನೆ ಮಾಡಲಿ.ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸಿಗಲಿ. ಪೋಷಕರು ಧೈರ್ಯವಾಗಿ ಮಾತನಾಡಲಿ ಎಂಬ ಉದ್ದೇಶ ಮಾತ್ರ ಬರಹ ಬದಲಾಯಿಸಿದ್ದರ ಹಿಂದಿರುವುದು ಎಂದು ಉದ್ದೇಶವಾಗಿದೆ ಎಂದು ವಿಜಯಪುರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುಂಡಲೀಕ ಮಾನವರ ತಿಳಿಸಿದ್ದಾರೆ.