ಹುಬ್ಬಳ್ಳಿ : ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ರಾಮಮಂದಿರದಿಂದ ಬಡತನ ನಿರ್ಮೂಲೀನಾಗುವುದಿಲ್ಲ ಎಂಬ ಸಚಿವ ಸಂತೋಷ್ ಲಾಡ್ ಹೇಳಿಕೆಗೆ ಕೇಂದ್ರ ಸಚಿವ ಪರಲಾದ್ ಜೋಶಿ ತಿರುಗೇಟು ನೀಡಿದ್ದು ಚರ್ಚ್ ಮಸೀದಿ ಕಟ್ಟುವುದರಿಂದ ಬಡತನ ನಿರ್ಮೂಲನೆ ಆಗುತ್ತದೆಯಾ? ಎಂದು ವಾಗ್ದಾಳಿ ನಡೆಸಿದ್ದಾರೆ.
‘ಸೀಟು ಹಂಚಿಕೆ’ ನಿರ್ಧಾರದ ನಂತರ ‘ಭಾರತ್ ಜೋಡೋ ನ್ಯಾಯ್ ಯಾತ್ರೆಗೆ’ ಸೇರುವೆ: ಅಖಿಲೇಶ್ ಯಾದವ್
ಹುಬ್ಬಳ್ಳಿಯಲ್ಲಿ ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಲಾಡ್ ಸುಪ್ರೀಂ ಕೋರ್ಟಿಗಿಂತ ಮೇಲಿದ್ದಾರ? ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ಈ ರೀತಿ ಮಾತನಾಡಿದ್ದಾರೆ. ಕಾಂಗ್ರೆಸ್ನವರು ಯಾಕೆ ಪ್ರಭುದ್ಧವಾಗಿ ಮಾತಾಡ್ತಾರೆ ಗೊತ್ತಿಲ್ಲ ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕಿಡಿ ಕಾರಿದರು.
ಯುವಜನರೇ ಗಮನಿಸಿ : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ ; ಈ ರೀತಿ ನೋಂದಣಿ ಮಾಡಿಕೊಳ್ಳಿ!
ಮನುಷ್ಯನಿಗೆ ಶ್ರದ್ಧೆ, ಸ್ವಾಭಿಮಾನ, ಆತ್ಮಭಿಮಾನ ಮುಖ್ಯ. ಅವಮಾನವನ್ನು ಯಾರು ಸಹಿಸುವುದಿಲ್ಲ. ರಾಮಮಂದಿರದ ಬಡತನ ನಿರ್ಮೂಲನೆ ಆಗಲ್ಲ ಎನ್ನುತ್ತಾರೆ. ಚರ್ಚ್ ಮಸೀದಿ ಕಟ್ಟುವುದರಿಂದ ಬಡತನ ನಿವಾರಣೆ ಆಗುತ್ತಾ? ಹೊಟ್ಟೆಯಲ್ಲಿ ಹಿಂದುಗಳ ಮತ್ತು ರಾಮನ ಬಗ್ಗೆ ಕಿಚ್ಚು ಯಾಕೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹದ ಜೋಶಿ ವಾಗ್ದಾಳಿ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಮುಟ್ಟಾಳತನವನ್ನು ತೋರ್ಪಡಿಸಿದೆ
ಶಾಲೆ, ಹಾಸ್ಟೆಲ್ ಗಳಲ್ಲಿ ಜ್ಞಾನ ದೆಗುಲವಿದು ಧೈರ್ಯವಾಗಿ ಪ್ರಸ್ನಿಸಿ ಎಂಬುದನ್ನು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಟ್ಟಾಳತನವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್‌ನ ತುಷ್ಟೀಕರಣದ ಪರಮಾವಧಿ ಎಂದು ಕಿಡಿ ಕಾರಿದರು.
ಪೋಷಕರೇ ನಿಮ್ಮ ಮಕ್ಕಳು ಚೆನ್ನಾಗಿ ಓದಬೇಕಾ.? ಈ ಮಂತ್ರ ಜಪಿಸಿ, ಪರಿಣಾಮ ನೋಡಿ
ಈ ಸರ್ಕಾರ, ಕುವೆಂಪು ಅವರ ಘೋಷ ವಾಕ್ಯವನ್ನೇ ಬದಲಾಯಿಸಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ದೃಷ್ಟಿಯಲ್ಲಿ ಕುವೆಂಪು ಜಾತ್ಯಾತೀತರಲ್ಲವೇ ಎಂದು ಪ್ರಶ್ನಿಸಿದರು. ಹಿಂದೂ ವಿರೋಧಿ ನಡೆ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂದಿರುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿರುವ ಜೋಶಿ ಅವರು, ಇದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಪರಾಕಾಷ್ಠೆ ತಲುಪಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಷ್ಟರ ಮಟ್ಟಿಗೆ ಹಿಂದೂ ವಿರೋಧಿ ನಡೆ ಅನುಸರಿಸುತ್ತಿದೆ ಮತ್ತು ಯಾವ ಹಂತಕ್ಕೆ ತುಷ್ಟೀಕರಣ ಮಾಡುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಚಿವ ಜೋಶಿ ಕಿಡಿಕಾರಿದರು.
ಟಾಟಾ ಸಮೂಹದ ಮಾರುಕಟ್ಟೆ ಮೌಲ್ಯವು ಈಗ ಪಾಕಿಸ್ತಾನದ ‘ಸಂಪೂರ್ಣ ಆರ್ಥಿಕತೆಗಿಂತ’ ಹೆಚ್ಚು