ಬೆಂಗಳೂರು : ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಜಯದೇವ ಆಸ್ಪತ್ರೆಯ ಕಾಮಗಾರಿಗಳು ನಡೆಯುತ್ತಿದ್ದು ಅದರಲ್ಲಿ ನಡೆದಂತಹ ಅವ್ಯವಹಾರದ ಕುರಿತಂತೆ ಹಾಗೂ ಇತರೆ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಹೀಗೆ ಅಷ್ಟಲಕ್ಷ್ಮಿಯರನ್ನು ಮನೆಗೆ ಕರೆದರೇ ಅಭ್ಯಂತರವಿಲ್ಲದೇ ಮನೆಯೊಳಗೆ ಬಂದು ಅಷ್ಟ ಸಂಪತ್ತನ್ನು ಕೊಡ್ತಾರೆ
ಕಳೆದ ಹತ್ತು ವರ್ಷಗಳ ಅವಧಿಯ ಕಾಮಗಾರಿಗಳ ತನಿಖೆಗೆ ಪ್ಲಾನ್ ರೂಪಿಸಲಾಗುತ್ತಿದೆ.ಬೆಂಗಳೂರು ಹುಬ್ಬಳ್ಳಿ ಕಲಬುರ್ಗಿ ಜಿಲ್ಲೆಯಲ್ಲಿನ ಕಾಮಗಾರಿಗಳ ಪರಿಶೀಲನೆ ತನಿಖೆಗೆ ಒಪ್ಪಿಸಲು ಸರ್ಕಾರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಜಯದೇವ ಆಸ್ಪತ್ರೆ ಕಾಮಗರಿಗಳ ತನಿಖೆಗೆ ಸರಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಜಯದೇವ ಆಸ್ಪತ್ರೆಯ ವ್ಯಾಪ್ತಿಯಲ್ಲಿ ಬರುವಂತಹ ಕಾಮಗಾರಿಯಾಗಿರಬಹುದು ಉಪಕರಣಗಳ ಖರೀದಿ, ಹಾಗೂ ವಿದೇಶಿ ದೇಣಿಗೆ ಸಂಗ್ರಹ ಸೇರಿದಂತೆ ಎಲ್ಲಾ ವಿಷಯಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇರುವಂತಹ ಜಯದೇವ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು ಅವುಗಳ ಕಾಮಗಾರಿ ಹಾಗೂ ಈ ಒಂದು ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು ಇದರ ಕುರಿತು ತನಿಖೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿದೆ.
BREAKING : ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾಮೀನು
ಈ ಹಿಂದಿನ ನಿರ್ದೇಶಕರಾಗಿರುವಂತಹ ಡಾ. ಸಿಎನ್ ಮಂಜುನಾಥ್ ಅವರು ಇದೀಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಅವರ ಮೇಲೂಕೂಡ ಹಲವು ಆರೋಪ ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಈ ಒಂದು ಜಯದೇವ್ ಆಸ್ಪತ್ರೆಯ ಕಾಮಗಾರಿಗಳಲ್ಲಿ ನಡೆದಂತ ವ್ಯವಹಾರಗಳ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸುವ ಸಾಧ್ಯತೆ ಇದ್ದು, ಅದರ ಭಾಗವಾಗಿ ರಾಜಕೀಯ ನಡೆಯುತ್ತಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ.