ರಾಮನಗರ : ರಾಮನಗರದಲ್ಲಿ ಪೊಲೀಸರು ಮತ್ತು ವಕೀಲರ ನಡುವೆ ಜಟಾಪಟಿ ಉಂಟಾಗಿದ್ದು ಪ್ರಕರಣದಲ್ಲಿ 40 ವಕೀಲರ ಮೇಲೆ ಎಫ್ಐಆರ್ ದಾಖಲಾಗಿದೆ. ಎಫ್ಐಆರ್ ದಾಖಲಾಗಿದ್ದನ್ನು ಖಂಡಿಸಿ ವಕೀಲ ಸಂಘ ಬೃಹತ್ ಪ್ರತಿಭಟನೆ ನಡೆಸಿದೆ.
ಇದೀಗ ಸಾಮಾಜಿಕ ಕಾರ್ಯಕರ್ತ ಗೋವಿಂದರಾಜು ಎಂಬುವವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ. ರಾಮನಗರದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಿದ್ದಾರೆ. ಹಾಗೂ ಜಿಲ್ಲಾಧಿಕಾರಿ, ಎಸ್ಪಿ, ಪಿಎಸ್ಐ ವರ್ಗಾವಣೆ ಮಾಡುವಂತೆ ಕೋರಿ ಪತ್ರ ಬರೆದಿದ್ದಾರೆ.
ರಾಜ್ಯಪಾಲರಿಗೆ ಬರೆದ ಪತ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಗೆ ಕಾರಣರಾದವರ ವಿರುದ್ಧ ಶಿಸ್ತುಕ್ರಮಕ್ಕೆ ಆಗ್ರಹಿಸಲಾಗಿದ್ದು ರಾಮನಗರದಲ್ಲಿ ಅಶಾಂತಿ, ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಈ ಕೂಡಲೇ ಜಿಲ್ಲೆಯಿಂದ ಮೂವರನ್ನೂ ವರ್ಗಾವಣೆ ಮಾಡುವಂತೆ ಪತ್ರ ಬರೆಯಲಾಗಿದೆ ಎಂದು ಹೇಳಲಗುತ್ತಿದೆ.
ಹಿಂದೂ ಗುರು ಪ್ರಮುಖ್ ಸ್ವಾಮಿ ಮಹಾರಾಜ್ ರನ್ನು ಚಂದ್ರನತ್ತ ಒಯ್ಯಲಿದೆ ‘ನಾಸಾದ ಖಾಸಗಿ IM-1 ಮಿಷನ್’