ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಫ್ಯಾಕ್ಟರಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆಗೆ ಸಂಬಂಧಿಸಿದಂತೆ ಇದೀಗ ಚಿಕಿತ್ಸೆ ಪಡೆಯುತ್ತಿದ್ದ ಸಾಜಿದ್ ಪಾಷಾ(15) ಎನ್ನುವ ಬಾಲಕ ಸಾವನಪ್ಪಿದ್ದಾನೆ.
ರಾಮನಗರ : 40 ವಕೀಲರ ವಿರುದ್ಧ FIR ದಾಖಲು ಕೇಸ್ : ಪಿಎಸ್ಐ ಸಸ್ಪೆಂಡ್ ಹಿನ್ನೆಲೆ ಪ್ರತಿಭಟನೆ ವಾಪಾಸ್
ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ಅಲ್ಲಾಭಕ್ಷ, ಅಫ್ರೋಜ್, ರಿಯಾಜ್, ಸಾಧಿಕ್, ಇಮ್ರಾನ್ರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಮೂರು ದಿನಗಳಿಂದ ಐಸಿಯುನಲ್ಲಿ ಸಾಜೀದ್ ಪಾಷ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಸಾಜಿದ್ ಪಾಷ ಸಾವನ್ನಪ್ಪಿದ್ದಾನೆ.
‘ಅಕ್ಕಿ ಬೆಲೆ’ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ಪ್ರಯತ್ನ: ದಾಸ್ತಾನು ಸಂಗ್ರಹದ ಮಾಹಿತಿ ನೀಡುವಂತೆ ಸೂಚನೆ
ಅಗ್ನಿ ದುರಂತ ಬಗ್ಗೆ ಕುಂಬಳಗೋಡು ಪೊಲೀಸರಿಂದ ತನಿಖೆ ಮುಂದುವರೆದಿದ್ದು, ಖಾಲಿ ಜಾಗದ ಶೆಡ್ನಲ್ಲಿ ಪರ್ಫ್ಯೂಮ್ ಕೆಮಿಕಲ್ ಫಿಲ್ಲಿಂಗ್ ಮಾಡಲಾಗುತ್ತಿತ್ತು. ಒಟ್ಟು 8 ಸಿಬ್ಬಂದಿ ಕೆಮಿಕಲ್ ಫಿಲ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇದೆ. ಫಿಲ್ಲಿಂಗ್ ವೇಳೆ ಸ್ಫೋಟಗೊಂಡು ಇಡೀ ಮನೆಗೆ ಬೆಂಕಿ ಆವರಿಸಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ದುರಂತದಲ್ಲಿ 1 ಬೈಕ್, 1 ಕಾರು ಹಾಗೂ ಆಟೋ ಸಂಪೂರ್ಣ ಹಾನಿಯಾಗಿದ್ದು, ಬೆಂಕಿಯ ತೀವ್ರತೆಗೆ ಅಕ್ಕಪಕ್ಕದ ಮನೆಯ ವಸ್ತುಗಳು ಬೆಂಕಿಗಾಹುತಿ ಆಗಿದೆ.
ಹಿಂದಿಭಾಷೆಗೆ ‘1600 ಕೋಟಿ’ ನೀಡಿರುವ ಕೇಂದ್ರ ಕನ್ನಡಕ್ಕೆ ಕೇವಲ ‘3 ಕೋಟಿ’ ನೀಡಿ ತಾರತಮ್ಯ: ಬಿಕೆ ಹರಿಪ್ರಸಾದ್
ಕಳೆದ ಎರಡು ದಿನಗಳ ಹಿಂದೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ಪರ್ಫ್ಯೂಮ್ ಕೆಮಿಕಲ್ ಸ್ಫೋಟಗೊಂಡ ಪರಿಣಾಮ ಆಕಸ್ಮಿಕ ಬೆಂಕಿಯಿಂದ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿತ್ತು. ಈ ಘಟನೆಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದರು. ಇದೀಗ ಮತ್ತೊಬ್ಬ ಬಾಲಕ ಸಾವನ್ನಪ್ಪಿದ್ದಾನೆ.