ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಹುಕ್ಕಾಬಾರ್ ನಿಷೇಧ ಮಾಡಲಾಗಿದೆ. ಇದನ್ನು ಅಧಿಕೃತವಾಗಿ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿ, ಇಂದು ಅಂಗೀಕಾರ ಪಡೆಯಲಾಗಿದೆ. ಇದಲ್ಲದೇ 21 ವರ್ಷದೊಳಗಿನವರಿಗೆ ಸಿಗರೇಟ್ ಮಾರಾಟ ಮಾಡುವುದನ್ನು ನಿಷೇಧಿಸುವ ಮಸೂದೆಗೂ ಅಂಗೀಕಾರದ ಮುದ್ರೆಯನ್ನು ಒತ್ತಲಾಗಿದೆ.
ಇಂದು ಕರ್ನಾಟಕ ವಿಧಾನಸಭೆಯಲ್ಲಿ ಕೋಟ್ಪಾ ಕಾಯ್ದೆಗೆ (ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳು) ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದೆ. ಈ ಮೂಲಕ ರಾಜ್ಯದಾದ್ಯಂತ ಎಲ್ಲಾ ಹುಕ್ಕಾ ಬಾರ್ ಗಳನ್ನು ನಿಷೇಧಿಸಿದಿಸಲಾಗಿದೆ.
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸಿಗರೇಟುಗಳು ಮತ್ತು ಇತರ ತಂಬಾಕು ಉತ್ಪನ್ನಗಳ ಮಾರಾಟವನ್ನು ರಾಜ್ಯವು ನಿಷೇಧಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ ಗುಡ್ ನ್ಯೂಸ್