ನವದೆಹಲಿ: ರೈತರ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಎರಡು ದಿನಗಳವರೆಗೆ ಸ್ಥಗಿತಗೊಳಿಸಲಾಗುವುದು ಎಂದು ರೈತ ಮುಖಂಡರೊಬ್ಬರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
“ಖನೌರಿಯಲ್ಲಿ ನಡೆದ ಘಟನೆಯ ಬಗ್ಗೆ ನಾವು ಚರ್ಚೆ ನಡೆಸುತ್ತೇವೆ. ದೆಹಲಿಯೆಡೆಗಿನ ನಮ್ಮ ಮೆರವಣಿಗೆಗೆ ಎರಡು ದಿನಗಳ ತಡೆ ಇರುತ್ತದೆ. ನಮ್ಮ ಮುಂದಿನ ಆಂದೋಲನ ಏನು ಎಂಬುದನ್ನು ನಾವು ನಂತರ ಸ್ಪಷ್ಟಪಡಿಸುತ್ತೇವೆ” ಎಂದು ಪಂಜಾಬ್ ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಮುಖ್ಯಸ್ಥ ರೈತ ಮುಖಂಡ ಸರ್ವನ್ ಸಿಂಗ್ ಪಂಧೇರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಮತ್ತೊಂದು ಸುತ್ತಿನ ಚರ್ಚೆಗಾಗಿ ಕೇಂದ್ರವು ರೈತರಿಗೆ ಮನವಿ ಮಾಡಿದ ನಂತರ ರೈತರ ಪ್ರಕಟಣೆ ಬಂದಿದೆ. “ರೈತರು ದೇಶಾದ್ಯಂತ ಇದ್ದಾರೆ. ನೀತಿಯನ್ನು ರೂಪಿಸುವಾಗ, ಇಡೀ ದೇಶದ ರೈತರ ಹಿತಾಸಕ್ತಿಯನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದು ಮುಖ್ಯ. ಇದನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ದಿನಗಳಲ್ಲಿ ಅವರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ” ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಪಿಟಿಐಗೆ ತಿಳಿಸಿದ್ದಾರೆ.
ಕೇಂದ್ರದೊಂದಿಗಿನ ನಾಲ್ಕನೇ ಸುತ್ತಿನ ಮಾತುಕತೆ ವಿಫಲವಾದ ನಂತರ ರೈತ ಸಂಘಗಳು ಬುಧವಾರ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆಯನ್ನು ಪುನರಾರಂಭಿಸಿವೆ. ಮೂವರು ಕೇಂದ್ರ ಸಚಿವರನ್ನು ಒಳಗೊಂಡ ಸರ್ಕಾರದ ಸಮಿತಿಯು ರೈತರೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಐದು ವರ್ಷಗಳವರೆಗೆ ಸರ್ಕಾರಿ ಸಂಸ್ಥೆಗಳು ದ್ವಿದಳ ಧಾನ್ಯಗಳು, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಲು ಪ್ರಸ್ತಾಪಿಸಿತ್ತು.
ಹಿಂದೂ ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ: ಅರ್ಚಕರು, ಸಿಬ್ಬಂದಿ ಮಕ್ಕಳ ಶಿಕ್ಷಣಕ್ಕೆ 50 ಸಾವಿರ ರೂ