ಬೆಂಗಳೂರು : ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಪಕ್ಷಾಂತರ ಗೊಳ್ಳುವುದು ಸಾಮಾನ್ಯವಾಗಿ ಬಿಟ್ಟಿದೆ ಇದೀಗ ತುಮಕೂರು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
2 ವರ್ಷದೊಳಗೆ ಪೊಲೀಸರನ್ನು ವರ್ಗ ಮಾಡುವಂತಿಲ್ಲ : ವಿಧಾನಸಭೆಯಲ್ಲಿ ಪೊಲೀಸ್ ತಿದ್ದುಪಡಿ ವಿಧೇಯಕ ಅಂಗೀಕಾರ
ಮುದ್ದಹನುಮಗೌಡ ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಗ್ರೀನ್ ಸಿಗ್ನಲ್ ಕೊಟ್ಟಿದ್ದರಿಂದ ಇಂದು ಅವರು ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ತುಮಕೂರು ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ ‘ಬೃಹತ್ ಉದ್ಯೋಗ ಮೇಳ’
2019ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಆದಂತ ಸಂದರ್ಭದಲ್ಲಿ ತುಮಕೂರಿನಿಂದ ಎಚ್ ಡಿ ದೇವೇಗೌಡ ಸ್ಪರ್ಧಿಸಿದ್ದರು ಟಿಕೆಟ್ ಕೈತಪ್ಪಿದ್ದರಿಂದ ಕೋಪಗೊಂಡು ಜೆಡಿಎಸ್ ತೊರೆದು ಮುದ್ದನುಮೇಗೌಡ ಬಿಜೆಪಿ ಸೇರಿದ್ದರು.ಇದೀಗ ಬಿಜೆಪಿಯನ್ನು ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಲ್ಲಿ ಸಂಚಾರ ನಿಯಮ ಉಲ್ಲಂಘನೆ : 338 ಶಾಲಾ ವಾಹನ ಚಾಲಕರ ವಿರುದ್ದ ಕೇಸ್