ಬೆಂಗಳೂರು : ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಇಂದು ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿಯ ಮಾಜಿ ಸಂಸದ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ.
ವಾರದಲ್ಲಿ ಮೂರು ದಿನ ಶಾಲಾ ಮಕ್ಕಳಿಗೆ ‘ರಾಗಿ ಮಾಲ್ಟ್’ ವಿತರಣೆಗೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಚಿವರಾದ ಜಿ ಪರಮೇಶ್ವರ್ ರಾಜಣ್ಣ ಸಮ್ಮುಖದಲ್ಲಿ ಇಂದು ಸೇರ್ಪಡೆ ಆಗಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಮುದ್ದಹನುಮೇಗೌಡ ಪಕ್ಷ ಸೇರ್ಪಡೆಗೆ ಹಲವು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ವರ್ಷಾನುಗಟ್ಟಲೆ ಸಾಲದ ಬಾಧೆಯಿಂದ ನರಳುತ್ತಿದ್ದರೆ ಈ ತಂತ್ರ ಮಾಡಿದರೆ ವಾರಗಳಲ್ಲಿಯೇ ಸಾಲದಿಂದ ಮುಕ್ತರಾಗುತ್ತಿರಿ!
ಮುದ್ದಹನುಮಗೌಡ ಪಕ್ಷ ಸೇರ್ಪಡೆಗೆ ಕಾಂಗ್ರೆಸ್ ನಾಯಕರು ಗ್ರೀನ್ ಸಿಗ್ನಲ್ ಕೊಟ್ಟಿದ್ದರಿಂದ ಇಂದು ಅವರು ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ತುಮಕೂರು ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ.
ಭಾರತೀಯ ವಿದ್ಯಾರ್ಥಿನಿ ಕೊಂದ ‘ಸಿಯಾಟಲ್ ಪೊಲೀಸ್’ ಮೇಲೆ ಕ್ರಿಮಿನಲ್ ಕೇಸ್ ಇಲ್ಲ :ವಾಷಿಂಗ್ಟನ್ ಪ್ರಾಸಿಕ್ಯೂಟರ್
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ತುಮಕೂರಿನಿಂದ ಟಿಕೆಟ್ ಕೈತಪ್ಪಿದ್ದರಿಂದ ಕೋಪಗೊಂಡು ಕಾಂಗ್ರೆಸ್ ತೊರೆದು ಮುದ್ದಹನುಮೇಗೌಡ ಬಿಜೆಪಿ ಸೇರಿದ್ದರು.ಇದೀಗ ಬಿಜೆಪಿಯನ್ನು ತೊರೆದು ಕಾಂಗ್ರೆಸ್ಸಿಗೆ ಸೇರ್ಪಡೆಯಾಗಿಲಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದಲ್ಲಿ ‘ಹುಕ್ಕಾಬಾರ್’ ನಿಷೇಧ-ಸಿಗರೆಟ್ ಸೇವನೆ ವಯೋಮಿತಿ ’21’ಕ್ಕೆ ಹೆಚ್ಚಳ : ವಿಧೇಯಕ ಅಂಗೀಕಾರ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದರು.ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಲ್ಲೂ ಕೂಡ ಅವರಿಗೆ ಟಿಕೆಟ್ ಕೈತಪ್ಪಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಟಿಕೆಟ್ ಕೈತಪ್ಪುವ ಭೀತಿಯಲ್ಲಿ ಇದೀಗ ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.