ಬೆಂಗಳೂರು : ರಾಜ್ಯ ಸರ್ಕಾರ ಪದೇ ಪದೇ ಯಡವಟ್ಟು ಮಾಡಿಕೊಳ್ಳುತ್ತಿದ್ದರು ಸಹ ತಿದ್ದಿಕೊಳ್ಳದೆ ಇದೀಗ ಮತ್ತೊಂದು ಯಡವಟ್ಟಿಗೆ ಕಾರಣವಾಗಿದೆ. ವಿದ್ಯಾರ್ಥಿಗಳಿಂದ ಪರೀಕ್ಷೆ ಶುಲ್ಕ ವಸೂಲಿ, ಘೋಷವಾಕ್ಯ ಬದಲಾವಣೆ ವಿವಾದ ಆಯ್ತು ಇದೀಗ ಹತ್ತನೇ ತರಗತಿ ಪೂರ್ವಸಿದ್ಧತಾ ಪರೀಕ್ಷೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರುವಂತೆ ಶಿಕ್ಷಣ ಇಲಾಖೆ ಮೌಖಿಕ ಆದೇಶ ನೀಡಿದೆ ಎನ್ನಲಾಗಿದೆ. ಇದರಿಂದ ಇಲಾಖೆ ಸಾರ್ವಜನಿಕರ ಅಥವಾ ಪೋಷಕರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ.
ಅನಿವಾಸಿ ಭಾರತೀಯರಿಗೆ ಪ್ರತ್ಯೇಕ ಸಚಿವಾಲಯವನ್ನು ರಚಿಸಲಿದೆ ‘ರಾಜ್ಯ ಸರ್ಕಾರ’
ಶಿಕ್ಷಣ ಇಲಾಖೆ ಇಲಾಖೆ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಲೇ ಇದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ಪ್ರವೇಶದ್ವಾರದ ಮೇಲೆ ಹಾಕಲಾಗಿದ್ದ ಕೈಮುಗಿದು ಬನ್ನಿ ಘೋಷವಾಕ್ಯದ ಬದಲಾಗಿ ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾವಣೆ ವಿವಾದ ಸೃಷ್ಟಿ ಮಾಡಿತ್ತು. ಸಾರ್ವಜನಿಕ ಆಕ್ರೋಶ, ಖಂಡನೆ ವ್ಯಕ್ತವಾಗುತ್ತಿದ್ದಂತೆ, ಯುಟರ್ನ್ ಹೊಡೆದ ಸರ್ಕಾರ ಹಾಗೆ ಆದೇಶ ನೀಡಿಲ್ಲ ಎಂದು ಸ್ಪಷ್ಟಪಡಿಸಿ ಮತ್ತೆ ಯಥಾಸ್ಥಿತಿ ಘೋಷವಾಕ್ಯ ಬರೆಸಿತು.
BREAKING : ರಾಜ್ಯದಲ್ಲಿ ಆತಂಕ ಹೆಚ್ಚಿಸಿದ ‘ಮಂಗನ’ ಕಾಯಿಲೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ
ಇದೀಗ ಹತ್ತನೇ ತರಗತಿ ಪರೀಕ್ಷೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರಬೇಕೆಂದು ಮೌಖಿಕ ಸೂಚನೆ ನೀಡಿ ಶಿಕ್ಷಣ ಇಲಾಖೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ. ಇತ್ತೀಚೆಗೆ ಪರೀಕ್ಷೆ ವೆಚ್ಚವೆಂದು ವಿದ್ಯಾರ್ಥಿಗಳಿಂದ 50 ರೂ, ವಸೂಲಿ ಮಾಡಿದ್ದ ಸರ್ಕಾರ. ಪರೀಕ್ಷೆ ಶುಲ್ಕ ವಸೂಲಿ ಮಾಡಿದ್ದಲ್ಲದೇ ಇದೀಗ ಹತ್ತನೇ ತರಗತಿಗೆ ನಡೆಯುವ ಪೂರ್ವಸಿದ್ಧತಾ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆಗಳನ್ನ ತರುವಂತೆ ಶಾಲೆಯಿಂದ ಮೌಖಿಕ ಸೂಚನೆ ನೀಡಿದೆ ಎಂಬ ಮಾಹಿತಿ ಬಂದಿದೆ.
ನಗರ ಪ್ರದೇಶಗಳಲ್ಲಿ ಅಕ್ರಮ ಬಡಾವಣೆಗಳನ್ನು ತಡೆಯಲು ಹೊಸ ಮಸೂದೆಯನ್ನು ಅಂಗೀಕರಿಸಿದ ರಾಜ್ಯ ಸರ್ಕಾರ
ಈ ಸಂಬಂಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರತಿಕ್ರಿಯಿಸಿದ್ದು, ಮಕ್ಕಳಿಂದ ಉತ್ತರ ಪತ್ರಿಕೆ ತರುವಂತೆ ಹೇಳಿರುವ ಶಿಕ್ಷಣ ಇಲಾಖೆ ನಡೆಯನ್ನು ಖಂಡಿಸಿದ್ದಾರೆ. ಪರೀಕ್ಷೆ ವೆಚ್ಚವೆಂದು ಶಾಲಾ ಮಕ್ಕಳಿಂದ 50ರೂ. ವಸೂಲಿ ಮಾಡಿದ್ದಲ್ಲದೆ ಈಗ ಪತ್ರಿಕೆಗಳನ್ನ ವಿದ್ಯಾರ್ಥಿಗಳೇ ತರಬೇಕು ಎಂದಿರುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.