ನವದೆಹಲಿ: ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದೊಂದಿಗೆ ಕಾಂಗ್ರೆಸ್‌ನ ಸೀಟು ಹಂಚಿಕೆ ಒಪ್ಪಂದಕ್ಕೆ ಅವಕಾಶ ನೀಡಿ, ಆಮ್ ಆದ್ಮಿ ಪಕ್ಷವು ದೆಹಲಿ, ಗುಜರಾತ್, ಅಸ್ಸಾಂ ಮತ್ತು ಹರಿಯಾಣದಲ್ಲಿ ಸೀಟುಗಳ ಬಗ್ಗೆ ಕಾಂಗ್ರೆಸ್ ಪಕ್ಷದೊಂದಿಗೆ ಸಹಮತ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.
ಇಂದು ಗುಜರಾತ್‌ಗೆ ಪ್ರಧಾನಿ ಮೋದಿ ಭೇಟಿ: 60,000 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
ಉಭಯ ಪಕ್ಷಗಳ ನಾಯಕರ ನಡುವೆ ಹಲವಾರು ಸುತ್ತಿನ ಮಾತುಕತೆಯ ನಂತರ, ಅವರು ಸ್ಪರ್ಧಿಸುವ ಸ್ಥಾನಗಳ ಸಂಖ್ಯೆಯ ಬಗ್ಗೆ ಒಪ್ಪಂದಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ: ಸದನದಲ್ಲಿ ಸಿ.ಎಂ.ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ!?
ಒಪ್ಪಂದದ ಪ್ರಕಾರ ದೆಹಲಿಯಲ್ಲಿ ಎಎಪಿ ನಾಲ್ಕು ಸ್ಥಾನಗಳಲ್ಲಿ ಮತ್ತು ಕಾಂಗ್ರೆಸ್ ಮೂರು ಸ್ಥಾನಗಳಲ್ಲಿ ಚುನಾವಣೆ ಎದುರಿಸಲಿದೆ. ಗುಜರಾತ್‌ನಲ್ಲಿ ಕಾಂಗ್ರೆಸ್ ಎಎಪಿಗೆ ಎರಡು ಸ್ಥಾನಗಳನ್ನು ನೀಡಿದರೆ, ಹರಿಯಾಣ ಮತ್ತು ಅಸ್ಸಾಂನಲ್ಲಿ ತಲಾ 1 ಸ್ಥಾನಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ.
I.N.D.I.A ಬ್ಲಾಕ್ ಪಾಲುದಾರರಾದ ಸಮಾಜವಾದಿ ಪಕ್ಷ (SP) ಮತ್ತು ಕಾಂಗ್ರೆಸ್ ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಮುಂಬರುವ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಸೀಟು ಹಂಚಿಕೆಯನ್ನು ಬುಧವಾರ ಅಂತಿಮಗೊಳಿಸಿವೆ. ಸಮಾಜವಾದಿ ಪಕ್ಷ ಮತ್ತು ಇತರ ಮೈತ್ರಿ ಪಾಲುದಾರರು 63 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಕಾಂಗ್ರೆಸ್‌ಗೆ 17 ಹಂಚಿಕೆ ಮಾಡಲಾಗಿದೆ.