ಮಂಡ್ಯ: ಸಂಸದೆ ಸುಮಲತಾ ಅಂಬರೀಶ್ ಅವರು ನನಗೆ ನಿರಂತರವಾಗಿ ಜೀವ ಬೆದರಿಕೆ ಕರೆಗಳು ಬರುತ್ತಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ. ಈ ಮೂಲಕ ತಮಗೆ ಜೀವ ಬೆದರಿಕೆ ಹಾಕಲಾಗುತ್ತಿದೆ ಎಂಬುದಾಗಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾನು ನಿರಂತರವಾಗಿ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಡುತ್ತಿದ್ದೇನೆ. ಈ ಕಾರಣಕ್ಕೆ ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂಬುದಾಗಿ ಹೇಳಿದರು.
ಕೆ ಆರ್ ಎಸ್ ಡ್ಯಾಂ ಸುತ್ತಮುತ್ತ ಗಣಿಗಾರಿಕೆಯನ್ನು ಮಾಡಬಾರದು ಎಂಬುದಾಗಿ ಹೈಕೋರ್ಟ್ ಆದೇಶಿಸಿದೆ. ಹೀಗಿದ್ದರೂ ಇದಕ್ಕೆ ಕ್ಯಾರೆ ಎನ್ನದೇ ಅಕ್ರಮವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ಇದರ ವಿರುದ್ಧ ನನ್ನ ಸಮರ ಮುಂದುವರೆಯಲಿದೆ ಎಂದರು.
ಅಂದಹಾಗೇ ಕೆಲ ದಿನಗಳ ಹಿಂದಷ್ಟೇ ಹೈಕೋರ್ಟ್ ಕೆ ಆರ್ ಎಸ್ ಡ್ಯಾಂ ಸುತ್ತಾಮುತ್ತಲಿನ 20 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ಹಾಗೂ ಇತರೆ ಚಟುವಟಿಕೆ ನಡೆಸದಂತೆ ತಾತ್ಕಾಲಿಕವಾಗಿ ನಿಷೇಧ ಮಾಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಆದೇಶದಂತೆ ಜಿಲ್ಲಾಡಳಿತದಿಂದ ಗಣಿಗಾರಿಕೆ ನಿಷೇಧ ಮಾಡಲಾಗಿತ್ತು.
BREAKING : ಡಿ ಬಾಸ್ ಗೆ ಮತ್ತೊಂದು ಸಂಕಷ್ಟ : ‘ಶ್ರೀ ಶಕ್ತಿ ಸಂಘದಿಂದ’ ನಟ ದರ್ಶನ್ ವಿರುದ್ಧ ದೂರು ದಾಖಲು
ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ