ಚಂಡೀಗಢ: ವಿವಿಧ ಬೇಡಿಕೆಗಳ ಈಡೇರಿಗೆ ಆಗ್ರಹಿಸಿ ದೆಹಲಿಯ ಗಡಿಯಲ್ಲಿ ರೈತರು ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಖನೌರಿ ಗಡಿಯಲ್ಲಿ ಮೃತಪಟ್ಟ ರೈತ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ 1ಕೋಟಿ ಪರಿಹಾರ ಹಾಗೂ ಆತನ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಶುಕ್ರವಾರ ಘೋಷಿಸಿದ್ದಾರೆ.
ದೆಹಲಿ, ಗುಜರಾತ್, ಗೋವಾ, ಯುಪಿ ನಂತರ ಬಂಗಾಳದಲ್ಲಿ ‘ಟಿಎಂಸಿ’ ಜೊತೆ ಕಾಂಗ್ರೆಸ್ ‘ಸೀಟು ಹಂಚಿಕೆ’ ಮಾತುಕತೆ ಆರಂಭ
ಪಂಜಾಬ್-ಹರಿಯಾಣ ಗಡಿಯಲ್ಲಿರುವ ಖನೌರಿ ಗಡಿಯಲ್ಲಿ ಬುಧವಾರ ನಡೆದ ಘರ್ಷಣೆಯಲ್ಲಿ ಬಟಿಂಡಾ ಮೂಲದ ಸಿಂಗ್ (21) ಮೃತಪಟ್ಟಿದ್ದರು. ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು. ಪ್ರತಿಭಟನಾನಿರತ ರೈತರು ಬ್ಯಾರಿಕೇಡ್ಗಳತ್ತ ಮುನ್ನುಗ್ಗಲು ಯತ್ನಿಸಿದಾಗ ಘರ್ಷಣೆ ನಡೆದಿತ್ತು. ಅವರನ್ನು ಚದುರಿಸಲು ಹರಿಯಾಣ ಪೊಲೀಸರು ಮೂರು ಸುತ್ತು ಅಶ್ರುವಾಯು ಶೆಲ್ಗಳನ್ನು ಸಿಡಿಸಿದ್ದರು. ಇದಕ್ಕೆ ಅವರು ಡ್ರೋನ್ ಅನ್ನೂ ಬಳಸಿದರು.
BREAKING: ‘ಬಿಜೆಪಿ’ಯಿಂದ ಲೋಕಸಭಾ ಚುನಾವಣೆಗೆ ‘ಡಾ.ಮಂಜುನಾಥ್’ ಸ್ಪರ್ಧೆ ಫಿಕ್ಸ್
ಖನೌರಿ ಗಡಿಯಲ್ಲಿ ನಡೆದ ರೈತ ಚಳವಳಿಯಲ್ಲಿ ಹುತಾತ್ಮರಾದ ಶುಭಕರನ್ ಸಿಂಗ್ ಅವರ ಕುಟುಂಬಕ್ಕೆ ಪಂಜಾಬ್ ಸರ್ಕಾರದಿಂದ 1 ಕೋಟಿ ಆರ್ಥಿಕ ನೆರವು ಹಾಗೂ ಅವರ ಸಹೋದರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಮಾನ್ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲೋಕಸಭೆ ಚುನಾವಣೆ : ಈ ಬಾರಿ ನನಗೆ ಬಿಜೆಪಿಯಿಂದ ಟಿಕೇಟ್ ಖಚಿತ : ಸುಮಲತಾ ಅಂಬರೀಷ್ ಹೇಳಿಕೆ
खनौरी बॉर्डर पर किसान आंदोलन के दौरान शहीद हुए शुभकरन सिंह के परिवार को पंजाब सरकार की ओर से 1 करोड़ रुपये की आर्थिक सहायता और उनकी छोटी बहन को सरकारी नौकरी दी जाएगी.. दोषियों के खिलाफ उचित कानूनी कार्रवाई की जाएगी ..फर्ज निभा रहे हैं…
— Bhagwant Mann (@BhagwantMann) February 23, 2024