ಬೆಂಗಳೂರು: ಅಯ್ಯೋ ತಗಡೇ ಎಂಬುದಾಗಿ ಹೇಳಿಕೆ ನೀಡಿ, ಗುಮ್ಮಿಸಿಕೊಳ್ಳೋದಕ್ಕೆ ಎಂಬುದಾಗಿ ಮಹಿಳೆಯರಿಗೆ ಅವಮಾನ ಮಾಡಿದಂತ ನಟ ದರ್ಶನ್ ವಿರುದ್ಧ ಈಗ ಮತ್ತೆರಡು ದೂರು ದಾಖಲಿಸಲಾಗಿದೆ.
ಬೆಂಗಳೂರು ರಾಜರಾಜೇಶ್ವರಿ ಠಾಣೆಗೆ ತೆರಳಿದಂತ ಗಣೇಶ್ ಗೌಡ ಹಾಗೂ ಜಗದೀಶ್ ಎಂಬುವವರು ನಟ ದರ್ಶನ್ ಅವರು ನೀಡಿದಂತ ಅಯ್ಯೋ ತಗಡೇ ಗುಮ್ಮಿಸಿಕೊಳ್ಳೋದಕ್ಕೆ ಎಂಬ ಅವಹೇಳನಕಾರಿ ಹೇಳಿಕೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಈ ಮೂಲಕ ನಟ ದರ್ಶನ್ ವಿರುದ್ಧ ಮತ್ತೆರಡು ದೂರು ದಾಖಲಾದಂತೆ ಆಗಿದೆ.
ಗಣೇಶ್ ಗೌಡ ಹಾಗೂ ಜಗದೀಶ್ ಸಲ್ಲಿಸಿರುವಂತ ದೂರಿನಲ್ಲಿ ಸಮುದಾಯಗಳ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಯನ್ನು ನಟ ದರ್ಶನ್ ನೀಡಿದ್ದಾರೆ. ಸಮುದಾಯಗಳು ರೊಚ್ಚಿಗೇಳೋ ಮುನ್ನವೇ ದರ್ಶನ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಈಗಾಗಲೇ ಪುಟ್ಟೇನಹಳ್ಳಿ ಠಾಣೆಯಲ್ಲಿ ನಟ ದರ್ಶನ್ ವಿರುದ್ಧ ಸ್ತ್ರೀಶಕ್ತಿ ಸಂಘಟನೆಗಳಿಂದ ದೂರು ನೀಡಲಾಗಿತ್ತು. ಈ ಮೂಲಕ ಎರಡು ದೂರು ದಾಖಲಾಗಿದ್ದವು. ಈಗ ಆರ್ ಆರ್ ನಗರ ಠಾಣೆಯಲ್ಲಿ ಮತ್ತೆರಡು ದೂರು ದಾಖಲಾದ ಪರಿಣಾಮ, ಈವರೆಗೆ 4 ದೂರುಗಳು ನಟ ದರ್ಶನ್ ವಿರುದ್ಧ ದಾಖಲಿಸಿದಂತೆ ಆಗಿದೆ. ಈ ಮೂಲಕ ಸ್ಯಾಂಡಲ್ ವುಡ್ ಸ್ಟಾರ್ ದರ್ಶನ್ ಗೆ ಮತ್ತೆ ಸಂಕಷ್ಟ ಎದುರಾದಂತೆ ಆಗಿದೆ.
ಬೆಂಗಳೂರು : ಕಾರು ವಿಚಾರವಾಗಿ ಸಹೋದರರ ನಡುವೆ ಗಲಾಟೆ : ಪೆಟ್ರೋಲ್ ಹಾಕಿ ತಮ್ಮನ ಕೊಲೆಗೈದ ಅಣ್ಣ