ಬೆಂಗಳೂರು: ಎಪಿಎಂಸಿ ಮಾರುಕಟ್ಟೆಗಳಿಗೆ ಮತ್ತಷ್ಟು ಬಲ ಸೇರಿದಂತೆ ವಿವಿಧ ಮಾರ್ಪಾಡಿಗಳಿಗೆ ಅವಕಾಶ ನೀಡುವಂತ ಎಪಿಎಂಸಿ ತಿದ್ದುಪಡಿ ವಿಧೇಯಕ ವಿಧಾನಪರಿಷತ್ತಿನಲ್ಲೂ ಅಂಗೀಕಾರಗೊಂಡಿದೆ.
ವಿಧಾನಸಭೆಯಲ್ಲಿ ಅಂಗೀಕಾರ ಪಡೆದಿದ್ದಂತ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು, ಇಂದು ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್ ಸರ್ಕಾರದಿಂದ ಮಂಡಿಸಲಾಗಿತ್ತು. ಇಂತಹ ಎಪಿಎಂಸಿ ತಿದ್ದುಪಡಿ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ.
ಈ ಹಿನ್ನಲೆಯಲ್ಲಿ ವಿಧಾನಪರಿಷತ್ತಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಅಭಿವೃದ್ಧಿ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಂತೆ ಆಗಿದ್ದು, ಶೀಘ್ರವೇ ಕಾಯ್ದೆಯಾಗಿ ಗೆಜೆಟ್ ಅಧಿಸೂಚನೆಯ ಮೂಲಕ ಹೊರ ಬೀಳಲಿದೆ.