ಬೆಂಗಳೂರು : ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಗೊಳಿಸುವ ಉದ್ದೇಶದಿಂದ ಫೆ. 29ರಿಂದ ಮಾ.9ರವರೆಗೆ ನಗರದ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ‘ಸಾರಸ್’ ಮೇಳ ಮತ್ತು ಬೃಹತ್ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳ ಆಯೋಜಿಸಲಾಗಿದೆ ಎಂದು ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
‘ದೇಹ’ ತೂಕವಿದ್ದರೆ ಸಾಲದು ‘ಮಾತಿನ’ ತೂಕವಿರಬೇಕು : ನಟ ದರ್ಶನ್ ಹೇಳಿಕೆಗೆ ನಿರ್ಮಾಪಕ ಉಮಾಪತಿಗೌಡ ಟಾಂಗ್
ಮೇಳದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಶುಕ್ರವಾರ ವಿಕಾಸಸೌಧದಲ್ಲಿ ಸರಸ್ ಮೇಳ 2024 ಮತ್ತು ಅಕ್ಕ ಕೆಫೆ ಲೋಗೋ ಅನಾವರಣಗೊಳಿಸಿದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ರಾಜ್ಯದ ‘ಅನುದಾನಿತ ಸರ್ಕಾರಿ ಶಾಲಾ ಶಿಕ್ಷಕ’ರಿಗೆ ಗುಡ್ ನ್ಯೂಸ್: 2 ದಿನ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು
ಲೋಗೋ ಅನವರಾನಗೊಳಿಸಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಮಾತನಾಡಿ, ಈ ರೀತಿಯ ಕರ ಕುಶಲ ವಸ್ತು ಪ್ರದರ್ಶನ ಬೆಂಗಳೂರಿನಲ್ಲಿ ಇಡೀ ವರ್ಷ ನಡೆಯಲು ಅನುಕೂಲ ವಾಗುವಂತೆ ಶಾಶ್ವತ ಪ್ರದರ್ಶನ ಕೇಂದ್ರಕ್ಕೆ ಸ್ಥಳಾವಕಾಶ ಕಲ್ಪಿಸಲು ಹುಡುಕಾಟ ನಡೆ ಯುತ್ತಿದೆ. ಬ್ರಾಂಡ್ ಬೆಂಗಳೂರು ಅಭಿಯಾನ ದಡಿಯಲ್ಲಿ ಇಂತಹ ಕಾರ್ಯ ಕ್ರಮ ಆಯೋಜಿಸಲಾಗುತ್ತಿದೆ ಎಂದರು.
‘ಮದುವೆ’ಯಿಂದ ಹಿಂದೆ ಸರಿಯುವುದು ‘IPC ಸೆಕ್ಷನ್ 417’ರಡಿ ಮೋಸದ ಅಪರಾಧವಲ್ಲ – ಸುಪ್ರೀಂ ಕೋರ್ಟ್
ಮೇಳವನ್ನು ಮುಖ್ಯಮಂತ್ರಿಸಿದ್ದ ರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಮತ್ತಿತರ ಗಣ್ಯರು ಉದ್ಘಾಟಿಸಲಿದ್ದಾರೆ. ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.