ಬೆಂಗಳೂರು : ರಾಜ್ಯದಲ್ಲಿ ಅತ್ಯಂತ ಮಹತ್ವ ಪಡೆದುಕೊಂಡಿರುವ ಲೋಕಸಭೆ ಚುನಾವಣಾ ಕ್ಷೇತ್ರ ಅಂದ್ರೆ ಅದು ಮಂಡ್ಯ ಲೋಕಸಭಾ ಚುನಾವಣೆ ಕ್ಷೇತ್ರ ಯಾಕೆಂದರೆ ಈ ಬಾರಿ ಅಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಯಾರಿಗೆ ಟಿಕೆಟ್ ಕೊಡಬೇಕೆಂಬುದು ತಲೆನೋವು ಪರಿಣಮಿಸಿದೆ. ಏಕೆಂದರೆ ಈಗಾಗಲೇ ಸಂಸಾದೆಯಾಗಿರುವ ಸುಮಲತಾ ಅಂಬರೀಶ್ ಅವರು ನನಗೆ ಟಿಕೆಟ್ ಬೇಕು ಎಂದು ಪಟ್ಟು ಹಿಡಿದಿದ್ದಾರೆ ಒಂದು ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವ ವಿಚಾರ ಕೂಡ ಅವರ ಮುಂದಿದೆ.
ಪ್ರತಿ ಅಪಘಾತ ಪ್ರಕರಣದಲ್ಲಿ ‘ಪ್ರತ್ಯಕ್ಷದರ್ಶಿಗಳು’ ಇರುತ್ತಾರೆ ಎಂದು ನಿರೀಕ್ಷಿಸಲು ಸಾಧ್ಯವಿಲ್ಲ: ಹೈಕೋರ್ಟ್
ಸುಮಲತಾರ ಬೆಂಗಳೂರು ನಿವಾಸದಲ್ಲಿ ಸಂಜೆ 4 ಗಂಟೆಗೆ ಹೈವೋಲ್ಟೇಜ್ ಮೀಟಿಂಗ್ ನಡೆಯಲಿದೆ. ಸಭೆಯಲ್ಲಿ ಸುಮಲತಾ ಹಾಗೂ ಅಂಬರೀಶ್ ಅವರ 100 ರಿಂದ 150ಕ್ಕೂ ಹೆಚ್ಚು ಪ್ರಮುಖ ಬೆಂಬಲಿಗರು, ಆಪ್ತರು ಭಾಗಿಯಾಗಲಿದ್ದಾರೆ. ಚುನಾವಣೆ ಸಿದ್ಧತೆ ಕುರಿತು ಮುಖಂಡರೊಂದಿಗೆ ಸುದೀರ್ಘ ಚರ್ಚೆ ನಡೆಸಲಿದ್ದಾರೆ.
ನಿರುದ್ಯೋಗ ಇಲ್ಲದಿದ್ದರೆ ಯುವಕರು 12 ಗಂಟೆಗಳ ಕಾಲ ‘ಮೊಬೈಲ್’ ಬಳಸುತ್ತಿರಲಿಲ್ಲ: ರಾಹುಲ್ ಗಾಂಧಿ
ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಬೆನ್ನಿಗೆ ನಿಂತ ಇಂಡವಾಳು ಸಚ್ಚಿದಾನಂದ ಸದ್ಯ ಸಂಸದೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಸಂಸದೆ ಸುಮಲತಾಗೆ ದೊಡ್ಡ ಹಿನ್ನಡೆಯಾಗಿದ್ದು, ಮತ್ತೆ ಅಖಾಡಕ್ಕೆ ಧುಮುಕಿದರೆ ಸಚ್ಚಿದಾನಂದ ಸಂಸದೆಗೆ ಅನಿವಾರ್ಯ. ಆದ್ದರಿಂದ ಸಚ್ಚಿ ಜೊತೆ ಮತ್ತೆ ಬಾಂಧವ್ಯ ಬೆಸಯಲು ಡಿ ಬಾಸ್ ಮೊರೆ ಹೋಗಿರುವ ಸುಮಲತಾ ಅವರು ಸಚ್ಚಿದಾನಂದ ಜೊತೆ ಸಂಧಾನ ಮಾಡಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಲ್ಲಿ ‘ವಿದೇಶಿ ಪ್ರಜೆ’ ಅಪಹರಿಸಿ ಹಣ ವಸೂಲಿ : ಸೀನಿಮಿಯ ರೀತಿಯಲ್ಲಿ ಆರೋಪಿಗಳನ್ನು ಬಂಧಿಸಿದ ‘ಖಾಕಿ’
ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಬೆನ್ನಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ನಿಂತಿದ್ದಾರೆ ಎಂದು ಹೇಳಲಾಗುತ್ತಿದೆ. ಈ ದಿನ ಸಭೆಯಲ್ಲಿ ನಟ ದರ್ಶನ್ ಕೂಡ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಮಂಡ್ಯ ಲೋಕಸಭಾ ಬಿಜೆಪಿ ಟಿಕೆಟ್ ಗಾಗಿ ಸುಮಲತಾ ಅಂಬರೀಶ್ ಅವರು ಪಟ್ಟು ಹಿಡಿದಿದ್ದಾರೆ ಎಂದು ಬೆಂಬಲಿಗರು ಅಭಿಮಾನಿಗಳ ಸಭೆಯನ್ನು ಕರೆದಿದ್ದಾರೆ.
ಬೆಂಗಳೂರಿನ ಜೆಪಿ ನಗರದಲ್ಲಿ ನಿವಾಸದಲ್ಲಿ ಇಂದು ಸುಮಲತ ಅಂಬರೀಶ್ ಅವರು ಮಹತ್ವದ ಸಭೆಯನ್ನು ನಡೆಸಲಿದ್ದಾರೆ ಸುಮಲತಾ ಅವರಿಂದ ಸಚ್ಚಿದಾನಂದ ಅಂತರ ಕಾಯ್ದುಕೊಂಡಿದ್ದಾರೆ. ಇಂಡವಾಳು ಸಚ್ಚಿದಾನಂದ ಜೊತೆಗೆ ಇದೀಗ ಸಂದಾನಕ್ಕೆ ಪ್ರಯತ್ನ ಮಾಡಲಾಗುತ್ತಿದೆ.ದರ್ಶನ್ ಮೂಲಕ ಸುಮಲತಾ ಅವರು ಸಚ್ಚಿದಾನಂದ ಜೊತೆ ಸಂಧಾನಕ್ಕೆ ಯತ್ನಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಅಲ್ಲದೆ ಇಂದು ನಡೆಯುವ ಸಭೆ ಬಹಳ ಕುತೂಹಲ ಮೂಡಿಸಿದೆ.