ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಹಿಂದಿ ಸಹ ಶಿಕ್ಷಕರಿಗೆ ಬಿಗ್ ಶಾಕ್ ನೀಡಲಾಗಿದೆ. ಅದೇ ಶಾಲಾ ಶಿಕ್ಷಣ ಇಲಾಖೆಯಿಂದ ಬಡ್ತಿ ಹಿಂಪಡೆದು ಆದೇಶ ಮಾಡಿದೆ.
ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015ರ ಮಾರ್ಚ್.23ರಿಂದ ಅನ್ವಯವಾಗುವ ಹಿಂದಿ ತತ್ಸಮಾನ ಪದವಿ ಮತ್ತು ಬಿ.ಇಡಿ ತತ್ಸಮಾನ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಹಿಂದಿ ಸಹಶಿಕ್ಷಕರಾಗಿ ಪಡೆದಿದ್ದ ಬಡ್ತಿ ಹಿಂಪಡೆಯಲು ನಿರ್ಧರಿಸಿದೆ ಎಂದಿದೆ.
ನ್ಯಾಯಾಲಯದ ಆದೇಶದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಡ್ತಿ ಹಿಂಪಡೆದ ಶಿಕ್ಷಕರಿಗೆ ಆಯಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ನಿಯಮಾನುಸಾರ ಸ್ಥಳ ನಿಯುಕ್ತಿಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.