ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ್ದಂತ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ ಎಂದು ತಿಳಿಸಿದ್ದಾರೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ… pic.twitter.com/Fls5GfaRGs
— Siddaramaiah (@siddaramaiah) February 25, 2024
BREAKING: ಹೃದಯಾಘಾತದಿಂದ ‘ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ’ ನಿಧನ | MLA Raja Venkatappa Nayaka No More
‘ಮಹದಾಯಿ’ ವಿಚಾರದಲ್ಲಿ ದೊಡ್ಡ ಅಪರಾಧ ಮಾಡಿದ್ದು ಕಾಂಗ್ರೆಸ್ : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ