ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಕೂಡ ಬಾಕಿ ಉಳಿದುಕೊಂಡಿದೆ. ಈ ನಡುವೆ ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನರಾಗಿದ್ದಾರೆ. ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಹೀಗಾಗಿ ಈ ಲೋಕಸಭಾ ಚುನಾವಣೆ ಜೊತೆಗೆ ಸುರಪುರ ವಿಧಾನಸಭೆಗೂ ಕೂಡ ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ರಾಜಾ ವೆಂಕಟಪ್ಪ ನಾಯಕ್ ಜಯಭೇರಿ ಬಾರಿಸಿದ್ದರು. ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ನರಸಿಂಹ ನಾಯಕ್ ಅವರನ್ನು 3,672 ಮತಗಳ ಅಂತರದಿಂದ ಸೋಲಸಿದ್ದರು.
ಈ ನಡುವೆ ಸಿಎಂ ಸಿದ್ರಾಮಯ್ಯ ಅವರು ಕೂಡ ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಅಂತ ತಿಳಿಸಿದ್ದಾರೆ.
33 ಕಾನೂನು ಪದವೀಧರರು ನ್ಯಾಯಾಧೀಶರಾಗಿ ಆಯ್ಕೆ: ಇಲ್ಲಿದೆ ಆಯ್ಕೆಯಾದವರ ಪಟ್ಟಿ!
EPFO ಚಂದಾದಾರರಿಗೆ ಬಿಗ್ ಶಾಕ್ : ಪ್ರತಿ 3 PF ‘ಕ್ಲೈಮ್’ಗಳಲ್ಲಿ 1 ತಿರಸ್ಕೃತ, ನೀವೂ ಈ ತಪ್ಪು ಮಾಡ್ಬೇಡಿ