ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಮಹತ್ವದ ಸಭೆಯನ್ನು ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ನಡೆಸುತ್ತಿದ್ದಾರೆ. ಈ ಸಭೆಗೆ ನಟ ದರ್ಶನ್ ಕೂಡ ಸರ್ಪ್ರೈಸ್ ಆಗಿ ಬಾಗಿಯಾಗಿದ್ದಾರೆ.
ಇಂದು ಬೆಂಗಳೂರಿನ ಜೆಪಿ ನಗರದಲ್ಲಿರುವಂತ ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಚರ್ಚಿಸೋದಕ್ಕೆ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ತಮ್ಮ ಬೆಂಬಲಿಗರ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಈ ಸಭೆಯ ಆರಂಭದಲ್ಲಿ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಇಂಡವಾಳ ಸಚ್ಚಿದಾನಂದ ಆಪ್ತರ ಜೊತೆ ಸುಮಲತಾ ಚರ್ಚೆ ನಡೆಸುತ್ತಿದ್ದಾರೆ.
ಬೆಂಬಲಿಗರ ಜೊತೆಗಿನ ಸಭೆಯ ಬಳಿಕ ಮಂಡ್ಯ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಜೊತೆಗೆ ಸಭೆಯನ್ನು ನಡೆಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಶಾಸಕ ರಾಜ ವೆಂಕಟಪ್ಪ ನಿಧನಕ್ಕೆ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಸಂತಾಪ
‘ಸಿದ್ರಾಮುಲ್ಲಾ ಖಾನ್’ ಹೇಳಿಕೆ: ‘ಸಂಸದ ಅನಂತಕುಮಾರ್ ಹೆಗಡೆ’ ವಿರುದ್ಧ ‘ಸುಮೊಟೋ ಕೇಸ್’ ದಾಖಲು