ಚಿಕ್ಕಮಗಳೂರು : ಚಿಕ್ಕಮಂಗಳೂರು ಲೋಕಸಭಾ ಕ್ಷೇತ್ರದ ಕುರಿತಾಗಿ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಹಾಗೂ ಮಾಜಿ ಸಚಿವ ಸಿಟಿ ರವಿ ನಡುವೆ ಬಿಗ್ ಫೈಟ್ ನಡೆಯುತ್ತಿದ್ದು ಇದೀಗ ಸಿಟಿ ರವಿ ಬೆಂಬಲಿಗರು ಗೋ ಬ್ಯಾಕ್ ಶೋಭಾ ಕರಂದ್ಲಾಜೆ ಮೂಲಕ ಪೋಸ್ಟರ್ ಗಳನ್ನೂ ಅಂಟಿಸಿದ್ದು ಈ ವಿಷಯವಾಗಿ ಇದೀಗ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿ ದಾಖಲಿಸಿದ್ದಾರೆ.
ಶೋಭಕ್ಕ ಎಲ್ಲಿದ್ದೀರ?, ಶೋಭಕ್ಕ ಕಾಣೆ ಎಂದು ತರೀಕೆರೆಯಿಂದ ಚಿಕ್ಕಮಗಳೂರುವರೆಗೂ ರಾತ್ರೋರಾತ್ರಿ ಪೋಸ್ಟರ್ಗಳನ್ನು ಅಂಟಿಸಿದ್ದ ನಾಲ್ವರು ಯುವಕರಾದ ಸಂಜು, ಸಂಜಯ್, ವಿಷ್ಣು, ಚಂದ್ರಶೇಖರ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ ಜನವರಿ 01ರಿಂದ ಚಿಕ್ಕಮಗಳೂರು ಉಡುಪಿ ಲೋಕಸಭಾ ಕ್ಷೇತ್ರದ ಸಂಸದೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ದಂಗಲ್ ಆರಂಭ ಮಾಡಿದ್ದಾರೆ. ಶೋಭಾ ವಿರುದ್ಧ ಗೋ ಬ್ಯಾಕ್ ಶೋಭಾ ,ಶೋಭಾ ಹಠಾವೋ ಬಿಜೆಪಿ ಬಚಾವೋ ಅಭಿಯಾನ ನಡೆಯುತ್ತಿದೆ. ಟಿಕೆಟ್ ನೀಡದಂತೆ ಕ್ಯಾಂಪೇನ್ ನಡೆಸಲಾಗಿದೆ. ಇದು ಬಿಜೆಪಿ ಹೈ ಕಮಾಂಡ್ ಕೋಪಕ್ಕೂ ಕಾರಣವಾಗಿದೆ.
ಈ ಯುವಕರು ತರೀಕೆರೆ ಮೂಲದವರು. ತರೀಕೆರೆ ಪಟ್ಟಣದಿಂದ ಚಿಕ್ಕಮಗಳೂರು ನಗರದ ವರೆಗೂ ಪೋಸ್ಟರ್ ಅಂಟಿಸಿದ್ದರು. ನಗರ ಸಭೆ ಪೌರ ಕಾರ್ಮಿಕ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಇನ್ನು ಯುವಕರು ಹಣ ನೀಡಿ ಪೋಸ್ಟರ್ ಅಂಟಿಸಲು ಹೇಳಿದ್ರು ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ ಬಸವನಹಳ್ಳಿ ಪೊಲೀಸರು ಪೋಸ್ಟರ್ ಸಂಬಂಧ ತನಿಖೆ ನಡೆಸುತ್ತಿದ್ದಾರೆ.