ಬೆಂಗಳೂರು: ಕರ್ನಾಟಕದ 4 ರಾಜ್ಯಸಭಾ ಸ್ಥಾನಗಳಿಗೆ ಮತದಾನ ಆರಂಭಗೊಂಡಿದೆ. ಮೊದಲ ಮತವನ್ನೇ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಚಲಾಯಿಸಿದರು. ಈವರೆಗೆ 39 ಶಾಸಕರಿಂದ ಮತದಾನ ಮಾಡಲಾಗಿದೆ.
ಬೆಂಗಳೂರಿನ ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ರಾಜ್ಯಸಭಾ ಚುನಾವಣೆಗೆ ಮತದಾನ ಆರಂಭಗೊಂಡಿದೆ. ಈವರೆಗೆ ಕಾಂಗ್ರೆಸ್ ಪಕ್ಷದ ಐವರು, ಬಿಜೆಪಿಯ 30 ಹಾಗೂ ಜೆಡಿಎಸ್ ಪಕ್ಷದ ನಾಲ್ವರು ಸೇರಿದಂತೆ 39 ಮಂದಿ ಮತ ಚಲಾಯಿಸಿದ್ದಾರೆ.
ಕಾಂಗ್ರೆಸ್ ನಿಂದ ಅಜಯ್ ಮಾಕೆನ್, ಸೈಯದ್ ನಾಸೀರ್ ಹುಸೇನ್, ಜಿ.ಸಿ.ಚಂದ್ರಶೇಖರ್, ಬಿಜೆಪಿಯಿಂದ ನಾರಾಯಣಸಾ ಬಾಂಡಗೆ, ಜೆಡಿಎಸ್ ನಿಂದ ಕುಪೇಂದ್ರ ರೆಡ್ಡಿ ಕಣದಲ್ಲಿದ್ದಾರೆ. ಅಡ್ಡ ಮತದಾನದ ಭೀತಿಯ ನಡುವೆ ಮಂಗಳವಾರದಂದು ಚುನಾವಣೆಯಲ್ಲಿ ಕಡ್ಡಾಯವಾಗಿ ಭಾಗಿಯಾಗಿ ತಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ಚಲಾಯಿಸುವಂತ ಶಾಸಕರಿಗೆ ಎಲ್ಲಾ ಪಕ್ಷಗಳು ವಿಪ್ ಜಾರಿ ಮಾಡಲಾಗಿದೆ.
ಕಾಂಗ್ರೆಸ್ 134, ಬಿಜೆಪಿ 66, ಜೆಡಿಎಸ್ 19, ಇತರರು 4 ಶಾಸಕರನ್ನು ಹೊಂದಿದ್ದಾರೆ. ಉಳಿದ ನಾಲ್ವರಲ್ಲಿ ಇಬ್ಬರು ಪಕ್ಷೇತರರು ಮತ್ತು ಸರ್ವೋದಯ ಕರ್ನಾಟಕ ಪಕ್ಷದ ದರ್ಶನ್ ಪುಟ್ಟಣ್ಣಯ್ಯ ಅವರ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ ಮತ್ತು ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.
Schoking News: ಮಂಡ್ಯದಲ್ಲಿ ‘ಆಸ್ತಿ ವಿಚಾರ’ವಾಗಿ ಮಗನಿಂದಲೇ ‘ತಂದೆ’ಯ ಬರ್ಬರ ಹತ್ಯೆ