ಬೆಂಗಳೂರು : ಇಂದು ರಾಜ್ಯಸಭೆಯ ಚುನಾವಣೆಯ ನಾಲ್ಕು ಸ್ಥಾನಗಳಿಗೆ ವಿಧಾನಸೌಧದಲ್ಲಿ ಮತದಾನ ನಡೆಯುತ್ತಿದ್ದು ಬಿಜೆಪಿಯ ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡುವ ಮೂಲಕ ಕಾಂಗ್ರೆಸ್ ಗೆ ಮತ ಹಾಕಿದ್ದಾರೆ,
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂರೂ ಅಭ್ಯರ್ಥಿ ಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ
ಇದಕ್ಕೆ ಬಿಜೆಪಿ ನಾಯಕರು ಸೇರಿದಂತೆ, ಕಾರ್ಯಕರ್ತರು ಕೂಡ ಕುಪಿತಗೊಂಡಿದ್ದು, ಶಾಸಕ ಎಸ್ ಟಿ ಸೋಮಶೇಖರ್ ಅವರ ಮನೆಯ ಮುಂದೆ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೆ ಅವರ ಮನೆಗೆ ಮುತ್ತಿಗೆ ಹಾಕಲು ಕೂಡ ಸಿದ್ದತೆ ಮಾಡಿಕೊಂಡಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಎಸ್ ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿದ್ದಕ್ಕೆ ಬಿಜೆಪಿ ಗರಂ ಆಗಿದ್ದು, ಬಿಜೆಪಿಯ ಯುವ ಮೋರ್ಚಾದಿಂದ ಪ್ರತಿಭಟನೆ ಸಾಧ್ಯತೆ ಹಿನ್ನೆಲೆಯಲ್ಲಿ ಮೈಕೋ ಲೇಔಟ್ ಪೋಲಿಸರಿಂದ ಎಸ್ಟಿ ಸೋಮಶೇಖರ್ ಮನೆಗೆ ಭದ್ರತೆಯನ್ನು ಒದಗಿಸಲಾಗಿದೆ ಎಂದು ತಿಳಿದುಬಂದಿದೆ.
ಎಸ್ಐ, ಕಾನ್ಸ್ಟೇಬಲ್ ಹುದ್ದೆಗಳಿಗೆ RRB RPF ‘ಅಧಿಸೂಚನೆ’ ನಕಲಿ :ʻPIBʼ ಫ್ಯಾಕ್ಟ್ ಚೆಕ್ ಸ್ಪಷ್ಟನೆ!