ಬೆಂಗಳೂರು : 2024ನೇ ಸಾಲಿನ ಸಿಗರೇಟುಗಳ ಮತ್ತು ಇತರ ತಂಬಾಕು ಉತ್ಪನ್ನಗಳ (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ವಿನಿಯಮ) ವಿಧೇಯಕ ಅಂಗೀಕಾರ ಆಗಿದೆ.ಆದ್ರೆ ಇದೀಗ ಬೆಂಗಳೂರಿನಲ್ಲಿ ತೆರೆದಿದ್ದ ಹುಕ್ಕಾ ಬಾರ್ ಗಳ ಮೇಲೆ CCB ಅಧಿಕಾರಿಗಳು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ.
‘ಅಡ್ಡಮತದಾನ’ ಮಾಡಿದ ಎಸ್.ಟಿ ಸೋಮಶೇಖರ್ : ಶಾಸಕರ ಮನೆಗೆ ‘ಮುತ್ತಿಗೆ’ ಹಾಕಲು ಬಿಜೆಪಿ ಯುವ ಮೋರ್ಚಾ ಸಿದ್ಧತೆ
ಕರ್ನಾಟಕದಲ್ಲಿ ಹುಕ್ಕಾ ಬಾರ್ಗಳನ್ನು ನಿಷೇಧಿಸಲಾಗಿದೆ. ನಿಷೇಧದ ನಡುವೆಯೂ ಕೆಲವು ಕಡೆ ಹುಕ್ಕಾ ಬಾರ್ಗಳನ್ನು ನಡೆಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ. ಹಾಗೂ 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಹಾಗೂ ಇತರೇ ವಸ್ತುಗಳನ್ನು ಸೀಜ್ ಮಾಡಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಮೂರೂ ಅಭ್ಯರ್ಥಿ ಗಳು ಗೆಲ್ಲುತ್ತಾರೆ: ಸಿಎಂ ಸಿದ್ದರಾಮಯ್ಯ
ಮಹಾಲಕ್ಷ್ಮೀ ಲೇಔಟ್, ಹೆಚ್ಎಎಲ್ ಹಾಗೂ ಕೆ.ಆರ್. ಪುರಂ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹುಕ್ಕಾ ಬಾರ್ಗಳ ಮೇಲೆ ನಿಷೇಧ ಹೇರಿತ್ತು. ಆದರೂ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ಹುಕ್ಕಾ ಬಾರ್ಗಳನ್ನು ನಡೆಸಲಾಗುತ್ತಿತ್ತು. ಈ ಬಗ್ಗೆ ಸೂಕ್ತ ಮಾಹಿತಿ ಆಧರಿಸಿ ನಗರ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಏಳು ಜನರನ್ನು ಬಂಧಿಸಲಾಗಿದೆ. 12.5 ಲಕ್ಷ ಮೌಲ್ಯದ ಹುಕ್ಕಾ ಫ್ಲೇವರ್ ಹಾಗೂ ಇತರೇ ವಸ್ತುಗಳನ್ನು ಸೀಜ್ ಮಾಡಲಾಗಿದೆ.