ಬೆಂಗಳೂರು: 7ನೇ ವೇತನ ಆಯೋಗದ ಶಿಫಾರಸ್ಸಿನ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಸರ್ಕಾರಿ ನೌಕರರಿಗೆ ಭರವಸೆ ನೀಡಿದ್ದಾರೆ.
ಹಳೆ ಪಿಂಚಣಿ (OPS) ಜಾರಿ ಬಗ್ಗೆ ‘ಮಹತ್ವದ’ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ!
ಬೆಂಗಳೂರಿನಲ್ಲಿ ನಡೆದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಖಾತರಿಗಳ ಅನುಷ್ಠಾನಕ್ಕೆ ಹಣಕಾಸಿನ ಬದ್ಧತೆಯ ಹೊರತಾಗಿಯೂ, 7 ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಆಯೋಗದ ಅಂತಿಮ ವರದಿಗಾಗಿ ಕಾಯುತ್ತಿದ್ದೇವೆ, ಕೇಂದ್ರ ಸರ್ಕಾರ ನಿರ್ಧರಿಸಿದಂತೆ ತುಟ್ಟಿಭತ್ಯೆ ನೀಡುತ್ತಿದ್ದೇವೆ ಎಂದು ಸಿಎಂ ಹೇಳಿದರು.
ಹಳೆ ಪಿಂಚಣಿ ಯೋಜನೆ ಮರು ಜಾರಿಗೆ ತರುವ ಬಗ್ಗೆ ಸರ್ಕಾರ ಚರ್ಚೆ ನಡೆಸುತ್ತಿದೆ ಎಂದರು. ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಕುರಿತು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಸಿಎಂ ಹೇಳಿದರು. ರಾಜ್ಯದ ಜನರಿಗಾಗಿ ಕೆಲಸ ಮಾಡಲು ನೌಕರರು ಆದ್ಯತೆ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.