ಬೀದರ್: ಟ್ರಕ್ ಹಾಗೂ ಟಾಟಾ ಎಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ. ಬೆಳಿಗ್ಗೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ.
ಮೃತಪಟ್ಟಿರುವ ಎಲ್ಲರೂ ಮಹಾರಾಷ್ಟ್ರದ ಉಗ್ಗಿರ್ ಮೂಲದವರು ಎಂದು ತಿಳಿದು ಬಂದಿದೆ.ಐವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ನ್ಯಾಯಾಲಯವು ಅಪರಾಧದ ಅರಿವನ್ನು ತೆಗೆದುಕೊಳ್ಳದಿದ್ದರೆ ‘ಪಾಸ್‌ಪೋರ್ಟ್’ ಮರು ನೀಡಿಕೆಯನ್ನು ನಿರಾಕರಿಸಲಾಗುವುದಿಲ್ಲ: ಹೈಕೋರ್ಟ್
ಟಾಟಾ ಏಸ್ ನಲ್ಲಿ 6 ಜನ ಮಹಿಳೆಯರು 5 ಜನ ಪುರುಷರು 3 ಮಕ್ಕಳು ಪ್ರಯಾಣಿಸುತ್ತಿದ್ದರು. ಈ ವೇಳೆ ಟ್ರಕ್-ಟಾಟಾ ಎಸಿ ನಡುವೆ ಡಿಕ್ಕಿಯಾಗಿದ್ದು ದಸ್ತಗಿರ್ ದಾವಲಸಾಬ್ (36) ರಸೀದಾ ಶೇಕ್ (41) ಟಾಟಾ ಎಸಿ ಚಾಲಕ ವಲಿ (31) ಅಮಾಮ್ ಶೇಕ್ (51) ಸೇರಿ ನಾಲ್ವರು ಮೃತಪಟ್ಟಿದ್ದಾರೆ.