ನವದೆಹಲಿ : ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಗೆ ಕೇಂದ್ರೀಯ ತನಿಖಾ ದಳವು ಸಮನ್ಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
2012-2016ರ ಅವಧಿಯಲ್ಲಿ ಹಮೀರ್ಪುರ್ನಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣ ಸಂಬಂಧ ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ದೆಹಲಿಗೆ ಗುರುವಾರ ಆಗಮಿಸಿ ವಿಚಾರಣೆಗೆ ಹಾಜರಾಗಬೇಕೆಂದು ಅಖಿಲೇಶ್ಗೆ ಸಮನ್ಸ್ನಲ್ಲಿ ಸೂಚಿಸಲಾಗಿದೆ.
‘ಬಿಟ್ ಕಾಯಿನ್’ ಪ್ರಕರಣ : ಆರೋಪಿಯನ್ನ 7 ದಿನಗಳ ಕಾಲ ‘SIT’ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ
ಬುಧವಾರ ಪ್ರತಿಕ್ರಿಯಿಸಿದ ಅಖಿಲೇಶ್ ಯಾದವ್, INDIA ಒಕ್ಕೂಟ ಬಲಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ಒಡೆಯಲು ಬಿಜೆಪಿ ಮುಂದಾಗುತ್ತಿದೆ. ಈ ಕಾರಣಕ್ಕೆ ಬೇರೆ ಪಕ್ಷದ ನಾಯಕರನ್ನು ಸೆಳೆದು ಅಡ್ಡ ಮತದಾನಕ್ಕೆ ಮುಂದಾಗಿದೆ ಎಂದು ಆರೋಪಿಸಿದರು.ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಬಿಜೆಪಿ 8, ಎಸ್ಪಿ 2 ಸ್ಥಾನಗಳನ್ನು ಗೆದ್ದುಕೊಂಡಿದೆ. ಎಸ್ಪಿಯ 7 ಶಾಸಕರು ಅಡ್ಡ ಮತದಾನ ಮಾಡಿದ ಪರಿಣಾಮ ಬಿಜೆಪಿಯ 8ನೇ ಅಭ್ಯರ್ಥಿ ಆರ್ಎಸ್ ಸಂಜಯ್ ಸೇಥ್ ಜಯಗಳಿಸಿದರು.
ಬೆಂಗಳೂರಲ್ಲಿ ಒತ್ತುವರಿ ವೇಳೆ ‘JCB’ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು : ಇಬ್ಬರು ಆರೋಪಿಗಳ ವಿರುದ್ಧ ದೂರು ದಾಖಲು