ಬೆಂಗಳೂರು: ರಾಜ್ಯ ಸರ್ಕಾರದಿಂದ 2023-24ನೇ ಸಾಲಿನಲ್ಲಿ ಆಯೋಜಿಸುತ್ತಿರುವ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ರಾಯಭಾರಿಯನ್ನಾಗಿ ನಟ ಡಾಲಿ ಧನಂಜಯ್ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯ ವತಿಯಿಂದ ಪ್ರತಿವರ್ಷ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಆಯೋಜಿಸುತ್ತಿದ್ದು, ಅದರಂತೆ ಪುಸಕ್ತ 2023-24ನೇ ಸಾಲಿನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಏರ್ಪಡಿಸಲು ಉದ್ದೇಶಿಸಿರುವ ಮೇರೆಗೆ ಮೇಲೆ ಓದಲಾದ ಕ್ರಮ ಸಂಖ್ಯೆ (3)ರ ಸರ್ಕಾರದ ಆದೇಶದಲ್ಲಿ ಈ ಸಂಬಂಧ ಸಂಘಟನಾ ಮತ್ತು ಕೋರ್ ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದೆ.
ದಿನಾಂಕ:03/01/2024ರಂದು ಮಾನ್ಯ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯಲ್ಲಿನ ನಿರ್ಣಯದನ್ವಯ ಈ ಚಲನಚಿತ್ರೋತ್ಸವವನ್ನು 2024ರ ಫೆಬ್ರವರಿ 29 ರಿಂದ ಮಾರ್ಚ್ 07ರವರೆಗೆ ಏರ್ಪಡಿಸಲಾಗಿದ್ದು, ಚಿತ್ರೋತ್ಸವದ ಉದ್ಘಾಟನಾ ಸಮಾರಂಭವನ್ನು ದಿ.29/02/2024 ರಂದು ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮುಂಭಾಗ ಹಾಗೂ ದಿ.07/03/2024ರಂದು ವಿಧಾನಸೌಧದ ಬ್ಯಾಂಕೈಟ್ ಹಾಲ್ನಲ್ಲಿ ಸಮಾರೋಪ ಸಮಾರಂಭವನ್ನು ಏರ್ಪಡಿಸಿದ್ದು, ಚಿತ್ರೋತ್ಸವದ ಕುರಿತು ಹೆಚ್ಚಿನ ಪುಚಾರಕ್ಕಾಗಿ ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀ ಡಾಲಿ ಧನಂಜಯ್ ಇವರನ್ನು ಚಿತ್ರೋತ್ಸವದ ರಾಯಭಾರಿಯನ್ನಾಗಿ (Brand Ambassador) ನೇಮಿಸಿ ಸರ್ಕಾರದ ಆದೇಶ ಹೊರಡಿಸುವಂತೆ ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಏಕಕಡತದಲ್ಲಿ ರಿಜಿಸ್ಟ್ರಾರ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಬೆಂಗಳೂರು ಇವರು ಕೋರಿರುತ್ತಾರೆ ಎಂದಿದ್ದಾರೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2023-24ನೇ ಸಾಲಿನಲ್ಲಿ ಬೆಂಗಳೂರಿನಲ್ಲಿ ಏರ್ಪಡಿಸಲಿರುವ “153e ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ”ದ ರಾಯಭಾರಿಯನ್ನಾಗಿ (Brand Ambassador) ಕನ್ನಡ ಚಿತ್ರರಂಗದ ಖ್ಯಾತ ನಟ ಶ್ರೀ ಡಾಲಿ ಧನಂಜಯ್ ಇವರನ್ನು ನೇಮಿಸಿ ಆದೇಶಿಸಿದೆ ಎಂದು ತಿಳಿಸಿದ್ದಾರೆ.
ಭಾರತೀಯ ರಾಕೆಟ್ ಜಾಹೀರಾತಿನಲ್ಲಿ ಚೀನಾದ ಧ್ವಜ : ‘DMK ಸರ್ಕಾರ’ದ ವಿರುದ್ಧ ‘ಪ್ರಧಾನಿ ಮೋದಿ’ ವಾಗ್ದಾಳಿ