ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 40 ನಿಗಮ ಮಂಡಳಿ ಸ್ಥಾನಗಳಿಗೆ ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಕಚೇರಿಯು 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದಿದೆ.
ಈಗಾಗಲೇ ಸಿಎಂ ಸಿದ್ಧರಾಮಯ್ಯ ಶಾಸಕರಿಗೆ ನಿಗಮ-ಮಂಡಳಿ ಸ್ಥಾನ ನೀಡಿ ಆದೇಶಿಸಿದ್ದರು. ಆ ಬಳಿಕ ಕಾರ್ಯಕರ್ತರಿಗೂ ನೀಡುವುದಾಗಿ ತಿಳಿಸಿದ್ದರು. ಅದರಂತೆ ಇದೀಗ 40 ನಿಗಮ-ಮಂಡಳಿ ಸ್ಥಾನಗಳನ್ನು ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.