ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೊನೆಗೂ ಕಾಂಗ್ರೆಸ್ ಕಾರ್ಯಕರ್ತರ ಬೇಡಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. 40 ನಿಗಮ ಮಂಡಳಿ ಸ್ಥಾನಗಳಿಗೆ ಕಾರ್ಯಕರ್ತರಿಗೆ ನೀಡುವುದಕ್ಕೆ ಸಿಎಂ ಸಿದ್ಧರಾಮಯ್ಯ ಅನುಮೋದನೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಕಾರ್ಯಕರ್ತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಈ ಕುರಿತಂತೆ ನಿನ್ನೆ ಮಾಹಿತಿ ಹಂಚಿಕೊಂಡಿರುವಂತ ಸಿಎಂ ಕಚೇರಿಯು 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ನಾಳೆ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದಿತ್ತು.
ಇದೀಗ 44 ಕಾಂಗ್ರೆಸ್ ಕಾರ್ಯಕರ್ತರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ನೀಡಿ, ಸಿಎಂ ಸಿದ್ಧರಾಮಯ್ಯ ಅವರು ಟಿಪ್ಪಣಿಯನ್ನು ಹೊರಡಿಸಿದ್ದಾರೆ. ಆಯಾ ಇಲಾಖೆಯಿಂದ ಸಂಬಂಧಿಸಿದವರಿಗೆ ಮಾಹಿತಿ ನೀಡುವಂತೆಯೂ ತಿಳಿಸಿದ್ದಾರೆ.
ಇಲ್ಲಿದೆ 44 ಕಾಂಗ್ರೆಸ್ ಕಾರ್ಯಕರ್ತರಿಗೆ ನೀಡಲಾಗಿರುವಂತ ಅಧ್ಯಕ್ಷ, ಉಪಾಧ್ಯಕ್ಷರ ಪಟ್ಟಿ