ಬೆಂಗಳೂರು : ರಾಜ್ಯದ ಎಲ್ಲಾ ಮಳಿಗೆಗಳಿಗೆ ಅಳವಡಿಸುವ ಬೋರ್ಡ್ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು ಎಂಬ ನಿಯಮ ಜಾರಿಯಾಗಿದೆ. ಅದರಂತೆ, ಬೋರ್ಡ್ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ. ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.
‘ಗರ್ಭವತಿ’ಯಾಗಿರುವುದಾಗಿ ಘೋಷಿಸಿದ ‘ದೀಪಿಕಾ ಪಡುಕೋಣೆ- ರಣವೀರ್ ಸಿಂಗ್’ ದಂಪತಿ
ಈ ಕುರಿತಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.
‘ಅಪಪ್ರಚಾರ’ ಮಾಡುವವರಿಗೆ ಬಿಸಿ ಮುಟ್ಟಿಸಿದ ಜಗ್ಗೇಶ್ : ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಕೋರ್ಟ್ನಿಂದ ‘ತಡೆಯಾಜ್ಞೆ’
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದು ತಿಳಿಸಿದ್ದಾರೆ.
‘ಕರ್ನಾಟಕ ದ್ರಾಕ್ಷಾರಸ ಮಂಡಳಿ’ಯ ಅಧ್ಯಕ್ಷರಾಗಿ ‘ಡಾ.ಬಿ ಯೋಗೇಶ್ ಬಾಬು’ ನೇಮಿಸಿ ‘ಸಿಎಂ ಸಿದ್ಧರಾಮಯ್ಯ’ ಆದೇಶ