ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬಗ್ಗೆ ಬಿಜೆಪಿ ತೀವ್ರ ಆಕ್ಷೇಪಿಸಿ, ತನಿಖೆಗೂ ಒತ್ತಾಯಿಸುತ್ತಿದೆ. ಇದರ ನಡುವೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿಯವರು ದೇಶ ಒಡೆಯುವಂತ ಕೆಲಸ ಮಾಡುತ್ತಿದ್ದಾರೆ. ಇವರು ಜೈ ಶ್ರೀರಾಮ್ ಅಂತಾರೆ. ನಾವು ಜೈ ಸೀತಾರಾಂ ಅಂತೀವಿ ಎಂಬುದಾಗಿ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಜೆಟ್ ಕುರಿತ ಚರ್ಚೆಯಲ್ಲಿ ಉತ್ತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾದರು. ಆದರೇ ಇದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ನಾಯಕರು ವಿರೋಧ ವ್ಯಕ್ತಪಡಿಸಿದರು.
ಇದು ದೇಶದ್ರೋಹಿಗಳ ರಕ್ಷಣೆ ಮಾಡ್ತಿದೆ ಸರ್ಕಾರವಾಗಿದೆ. ಈ ಸರ್ಕಾರದ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ವಿಪಕ್ಷಗಳಿಂದ ಆಕ್ರೋಶ ಹೊರಹಾಕಲಾಯಿತು. ಅಲ್ಲದೇ ವಿಧಾನಸಭೆಯಲ್ಲಿ ವಿಪಕ್ಷಗಳ ಸದಸ್ಯರು ನ್ಯಾಯ ಬೇಕು ಎಂದು ಘೋಷಣೆ ಕೂಗಿದರು.
ಈ ಸಂದರ್ಭದಲ್ಲಿ ವಿಪಕ್ಷಗಳ ನಡೆಗೆ ಸಿಎಂ ಸಿದ್ಧರಾಮಯ್ಯ ಗರಂ ಆದರು. ಅಲ್ಲದೇ ರಾಜ್ಯದ ಜನತೆಯ ಬಗ್ಗೆ ಇವರಿಗೆ ಕಾಳಜಿ ಇಲ್ಲ, ಜವಾಬ್ದಾರಿ ಇಲ್ಲ. ಬಜೆಟ್ ದಿನ ಹೊರ ಹೋಗಿದ್ದು ಇತಿಹಾಸದಲ್ಲೇ ಇರಲಿಲ್ಲ ಎಂದು ವಾಗ್ಧಾಳಿ ನಡೆಸಿದರು.
ಪಾಕಿಸ್ತಾನದ ಪರ ಘೋಷಣೆ ಕೂಗಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ: ಗೃಹ ಸಚಿವ ಡಾ.ಜಿ.ಪರಮೇಶ್ವರ್