ನವದೆಹಲಿ : ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದರಿಂದ 1 ಕೋಟಿ ಕುಟುಂಬಗಳಿಗೆ ಪ್ರಯೋಜನ ದೊರೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಇನ್ನು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಇಂದು ಕ್ಯಾಬಿನೆಟ್ ಸಭೆ ನಡೆದಿದ್ದು, ಕೆಲವು ಪ್ರಮುಖ ನಿರ್ಧಾರಗಳನ್ನ ತೆಗೆದುಕೊಂಡಿದೆ. ಸಭೆಯ ನಂತ್ರ ಮಾಹಿತಿ ನೀಡಿದ ಸಚಿವ ಅನುರಾಗ್ ಠಾಕೂರ್, “ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಯಡಿ 1 ಕೋಟಿ ಕುಟುಂಬಗಳಿಗೆ 300 ಯೂನಿಟ್ ವಿದ್ಯುತ್ ಉಚಿತವಾಗಿ ಸಿಗಲಿದೆ. ಈ ಯೋಜನೆಯಿಂದ ಸುಮಾರು 5-6 ಕೋಟಿ ಜನರು ಪ್ರಯೋಜನ ಪಡೆಯಲಿದ್ದಾರೆ” ಎಂದು ಹೇಳಿದರು.
ಇನ್ನು ಕೇಂದ್ರ ಸೌರ ಯೋಜನೆಯಡಿ 2025ರ ವೇಳೆಗೆ ಎಲ್ಲಾ ಸರ್ಕಾರಿ ಕಟ್ಟಡಗಳನ್ನ ಮೇಲ್ಛಾವಣಿ ಸೌರ ಫಲಕಗಳಿಂದ ಮುಚ್ಚಲಾಗುವುದು ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ. ಈ ಮೂಲಕ ಸರ್ಕಾರಿ ಕಟ್ಟಡಗಳು ವಿದ್ಯುತ್ ಮುಕ್ತವಾಗಲಿದ್ದು, ಸೌರ ಶಕ್ತಿ ಬೆಳಗಲಿದೆ.
BREAKING : ‘ಶಹಜಹಾನ್ ಶೇಖ್’ ವಿರುದ್ಧ ‘TMC’ ಮಹತ್ವದ ಕ್ರಮ : 6 ವರ್ಷ ಪಕ್ಷದಿಂದ ಅಮಾನತು