ನವದೆಹಲಿ: ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕ್ರಮವಾಗಿ ಅಮೇಥಿ ಮತ್ತು ರಾಯ್ ಬರೇಲಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂದು ಮೂಲಗಳು ಗುರುವಾರ (ಫೆಬ್ರವರಿ 29) ತಿಳಿಸಿವೆ. ಒಂದು ವೇಳೆ ಪಕ್ಷವು ಪ್ರಿಯಾಂಕಾ ಗಾಂಧಿ ಅವರ ಹೆಸರನ್ನು ಲೋಕಸಭಾ ಚುನಾವಣೆಗೆ ಘೋಷಿಸಿದರೆ ಇದು ಅವರಿಗೆ ಚೊಚ್ಚಲ ಚುನಾವಣೆಯಾಗಲಿದೆ . 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಸೋಲು ಅನುಭವಿಸಿದ್ದರು.
ಶಿವಮೊಗ್ಗ: ಶ್ರೇಷ್ಠ ವಿಚಾರಗಳು ದೇಶ, ಭಾಷೆಗಳ ಗಡಿ ದಾಟಲು ಭಾಷಾಂತರ ಅಗತ್ಯ- ಪ್ರೊ. ರಾಜೇಂದ್ರ ಚೆನ್ನಿ
2004 ರಿಂದ ಸೋನಿಯಾ ಗಾಂಧಿ ಸಂಸದರಾಗಿರುವ ರಾಯ್ ಬರೇಲಿ ಮತ್ತೊಂದು ಕಾಂಗ್ರೆಸ್ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿದೆ, ಆದಾಗ್ಯೂ, ಅವರ ಕುಟುಂಬದ ಇನ್ನೊಬ್ಬ ಸದಸ್ಯ ಲೋಕಸಭಾ ಸ್ಥಾನಕ್ಕೆ ಹೋಗಬಹುದು ಎಂದು ಅವರು ಸುಳಿವು ನೀಡಿದ್ದರು.
ಅಮೇಥಿಯಿಂದ ಕೇಂದ್ರ ಸಚಿವೆ ಮತ್ತು ಬಿಜೆಪಿ ಸಂಸದೆ ಸ್ಮೃತಿ ಇರಾನಿ ವಿರುದ್ಧ ರಾಹುಲ್ ಗಾಂಧಿ ಅವರನ್ನು ಮತ್ತೊಮ್ಮೆ ಕಣಕ್ಕಿಳಿಸಿದರೆ ಅಮೇಥಿಯಲ್ಲಿ ಮತ್ತೊಂದು ಕುತೂಹಲಕಾರಿ ಸ್ಪರ್ಧೆ ಎದುರಾಗುವ ಸಾಧ್ಯತೆ ಇದೆ. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಇರಾನಿ ಅವರು ರಾಹುಲ್ ಅವರನ್ನು 55,120 ಮತಗಳ ಅಂತರದಿಂದ ಸೋಲಿಸಿದ್ದರು. ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ರಾಹುಲ್ ಗಾಂಧಿ ಲೋಕಸಭೆ ಪ್ರವೇಶಿಸಿದರು.
ಉಚಿತವಾಗಿ ಇ-ಪ್ಯಾನ್ ಕಾರ್ಡ್ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಹಂತ ಹಂತದ ಮಾಹಿತಿ!