ಬೆಂಗಳೂರು: ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ನಿಧನರಾಗಿದ್ದಾರೆ ಎನ್ನಲಾಗಿತ್ತು. ಆದ್ರೇ ಅವರು ಜೀವಂತವಾಗಿದ್ದಾರೆ. ನಿಧನರಾಗಿಲ್ಲ ಎಂಬುದಾಗಿ ಅವರ ಅಳಿಯ ಸ್ಪಷ್ಟಪಡಿಸಿದ್ದಾರೆ. ಅಲ್ಲವೇ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರೋದಾಗಿ ತಿಳಿದು ಬಂದಿದೆ.
ಈ ಹಿನ್ನಲೆಯಲ್ಲಿ ಇಂದು ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರು, ಕೆ.ಶಿವರಾಮ್ ಚಿಕಿತ್ಸೆ ಪಡೆಯುತ್ತಿರುವಂತ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ, ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.
ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಅವರೊಂದಿಗೆ ಮಾಜಿ ಸಚಿವ ಗೋವಿಂದ ಕಾರಜೋಳ ಕೂಡ ಆಗಮಿಸಿ, ವೈದ್ಯರಿಂದ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿಯನ್ನು ಪಡೆದರು.
ಮಾವನಿಗೆ ಏನು ಆಗಿಲ್ಲ – ಪ್ರದೀಪ್ ಮಾಹಿತಿ
ಸ್ಯಾಂಡಲ್ವುಡ್ ನಟ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮ್ ಅವರು ಹೃದಯಾಘಾತಕ್ಕೆ ಒಳಗಾದ ನಂತ್ರ, ಅವರನ್ನು ಬೆಂಗಳೂರಿನ ಹೆಚ್‌ಸಿಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ಬದುಕಿದ್ದಾರೆ. ಏನೂ ಆಗಿಲ್ಲ. ಅವರು ನಿಧನರಾಗಿದ್ದಾರೆ ಎಂಬುದು ಸುಳ್ಳು. ಮಾವನ ಆರೋಗ್ಯದ ಬಗ್ಗೆ ಅಪಪ್ರಚಾರ ಮಾಡದಂತೆ ಅಳಿಯ ಪ್ರದೀಪ್ ಮನವಿ ಮಾಡಿದ್ದಾರೆ.
BREAKING: ಕೊನೆಗೂ ‘ರಾಜ್ಯ ಸರ್ಕಾರ’ಕ್ಕೆ ‘ಜಾತಿಗಣತಿ ವರದಿ’ ಸಲ್ಲಿಸಿದ ‘ಹಿಂದುಳಿದ ಆಯೋಗದ ಅಧ್ಯಕ್ಷ’.!
‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘ಪಂಚಾಯತ್ ರಾಜ್ ಇಲಾಖೆ’ಯ ‘2022 ಖಾಲಿ ಹುದ್ದೆ’ ಭರ್ತಿಗೆ ಪ್ರಕ್ರಿಯೆ ಆರಂಭ