ಬೆಂಗಳೂರು: ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಅವರು ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ ಎಂಬುದಾಗಿ ಅಧಿಕೃತ ಮಾಹಿತಿ ಹೊರಬಿದ್ದಿದೆ.
ಈ ಬಗ್ಗೆ ಕುಟುಂಬಸ್ಥರು ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದು ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. ಅವರು ಸಂಜೆ 4.15ರ ವೇಳೆಗೆ ಕೊನೆಯುಸಿರೆಳೆದರು ಎಂಬುದಾಗಿ ತಿಳಿಸಿದ್ದಾರೆ.
ಬೆಂಗಳೂರಿನ ಖಾಸಗಿ ಆಶ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಇಂದು ಸಂಜೆ 4.15ರಲ್ಲಿ ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ನೆರವೇರಿಸೋದಾಗಿ ಮಾಹಿತಿಯನ್ನು ನೀಡಿದ್ದಾರೆ.
ಅಂದಹಾಗೇ ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.
‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ‘ಪಂಚಾಯತ್ ರಾಜ್ ಇಲಾಖೆ’ಯ ‘2022 ಖಾಲಿ ಹುದ್ದೆ’ ಭರ್ತಿಗೆ ಪ್ರಕ್ರಿಯೆ ಆರಂಭ