ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆ, ವಿಜಯನಗರ ಜಿಲ್ಲಾಸ್ಪತ್ರೆ, ದೊಡ್ಡಬಳ್ಳಾಪುರ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗಳಲ್ಲಿ ತಲಾ 50 ಬೆಡ್ ಗಳ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ 137.75 ಕೋಟಿ ವೆಚ್ವದಲ್ಲಿ 50 ಬೆಡ್ ಕ್ರಿಟಿಕಲ್ ಕೇರ್ ಗಳ ಸ್ಥಾಪನೆಗೆ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಸೂಲಿಬೆಲೆಗೆ ಕಲಬುರಗಿ ಪ್ರವೇಶ ನಿರ್ಬಂಧ : ಆದೇಶವನ್ನು ತೆರವುಗೊಳಿಸಿದ ಹೈಕೋರ್ಟ್
ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಅನುಮೋದನೆಗೊಂಡ ಕ್ರಿಟಿಕಲ್ ಕೇರ್ ಗಳಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ 5 ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ 6 ಆಸ್ಪತ್ರೆಗಳು ಸೇರಿದಂತೆ ಒಟ್ಟು 11 ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿತ್ತು. ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುವ 5 ಜಿಲ್ಲಾಸ್ಪತ್ರೆಗಳಲ್ಲಿ ಕ್ರಿಟಿಕಲ್ ಕೇರ್ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ದೊರಕಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್ ಆಸ್ಪತ್ರೆ, ವಿಜಯನಗರ ಜಿಲ್ಲಾಸ್ಪತ್ರೆ, ದೊಡ್ಡಬಳ್ಳಾಪುರ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗಳಲ್ಲಿ ತಲಾ 50 ಬೆಡ್ ಗಳ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ.ಈ 05 ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ ಕಾಮಗಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಯೋಜನೆ PM-ABHIM ಅಡಿ ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ವೆಚ್ಚವನ್ನ ಭರಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ.
ನೀವು ದೇಶ ಪ್ರೇಮಿಗಳಲ್ಲ ‘ದ್ವೇಷದ ಪ್ರೇಮಿಗಳು’ : ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ