ಬಳ್ಳಾರಿ : ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಟ್ಟು ಬಿಜೆಪಿಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸೇರ್ಪಡೆಯಾಗಿದ್ದಾರೆ. ಇದೀಗ ಇದರ ಬೆನ್ನಲ್ಲೇ ಗಂಗಾವತಿ ಕ್ಷೇತ್ರದ ಕೆ ಆರ್ ಪಿ ಪಿ ಶಾಸಕ ಜನಾರ್ದನ ರೆಡ್ಡಿ ಕೂಡ ಬಿಜೆಪಿಗೆ ಮರಳುವ ಕುರಿತು ಮಾಜಿ ಸಚಿವ ಶ್ರೀರಾಮುಲು ಸುಳಿವು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕದ ‘ಮಣ್ಣು’ ಕಂಡವರ ಪಾಲು : ‘ಅಕ್ರಮ’ ನಡೆಯುತ್ತಿದ್ದರು ‘ಕಣ್ಣುಮುಚ್ಚಿ’ ಕುಳಿತ ಅಧಿಕಾರಿಗಳು
ಬಳ್ಳಾರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ರೆಡ್ಡಿ ಅವರನ್ನು ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದರ ಬಗ್ಗೆ ಅಮಿತ್ ಶಾ ನನ್ನ ಅಭಿಪ್ರಾಯ ಕೇಳಿದ್ದರು. ರೆಡ್ಡಿ ಅವರಿಗೆ ಕ್ಷೇತ್ರದಲ್ಲಿ ವರ್ಚಸ್ಸು ಇದೆ, ಅವರನ್ನು ಪಕ್ಷಕ್ಕೆ ಮರಳಿ ಕರೆತಂದರೆ ಬಿಜೆಪಿಗೆ ಲೋಕಸಭೆ ಚುನಾವಣೆಯಲ್ಲಿ ಲಾಭವಾಗಲಿದೆ ಎಂದು ಹೇಳಿದ್ದೇನೆ ಎಂದು ತಿಳಿಸಿದರು.
Caste Census : ನಾನು ಯಾವ ಜಾತಿ ಎಂದು ಯಾರೂ ಬಂದು ಮಾಹಿತಿ ಕೇಳಿಲ್ಲ: ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ
ಜನಾರ್ದನ ರೆಡ್ಡಿ ಮತ್ತು ನನ್ನ ಮಧ್ಯೆ ಕೆಲವು ಭಿನ್ನಾಭಿಪ್ರಾಯಗಳಿರಬಹುದು. ಆದರೆ ಅವರು ಪಕ್ಷಕ್ಕೆ ಬಂದರೆ ನಾವು ಒಗ್ಗಟ್ಟಾಗಿ ಹೋರಾಟ ಮಾಡುತ್ತೇವೆ.ಜನಾರ್ದನ ರೆಡ್ಡಿ ಅವರೊಂದಿಗೆ ವೈಯಕ್ತಿಕವಾಗಿ ಸಮಸ್ಯೆ ಇರಲಿಲ್ಲ. ಆದರೆ, ಅವರು ಹೊಸ ಪಕ್ಷ ಕಟ್ಟಿದ್ದರಿಂದ ರಾಜಕೀಯವಾಗಿ ವೈಮನಸ್ಸು ಉಂಟಾಗಿತ್ತು. ಶ್ರೀರಾಮುಲು ಮೂಲಕ ಜನಾರ್ದನ ರೆಡ್ಡಿಯವರನ್ನು ಬಿಜೆಪಿಗೆ ಮರಳಿ ಸೇರ್ಪಡೆಗೊಳಿಸುವ ಯತ್ನ ನಡೆಯುತ್ತಿದೆ ಎಂದು ಕಳೆದ ತಿಂಗಳು ಗಾಲಿ ಸೋಮಶೇಖರ ರೆಡ್ಡಿ ಹೇಳಿದ್ದರು.
ಪಾಕಿಸ್ತಾನ ಪರ ಘೋಷಣೆ ಆರೋಪ : ಮೂವರ ವಾಯ್ಸ್ ಸ್ಯಾಂಪಲ್ ‘FSL’ ಗೆ ರವಾನಿಸಿದ ಪೊಲೀಸರು
ಅಲ್ಲದೆ ಜನಾರ್ದನ್ ರೆಡ್ಡಿ ಅವರನ್ನು ಮತ್ತೆ ಬಿಜೆಪಿಗೆ ಸೇರ್ಪಡೆಗೊಳಿಸುವ ಕುರಿತಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಳಿಯೂ ಈ ವಿಚಾರವಾಗಿ ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.