ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ( Karnataka Congress Government ) ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪಂಚ ಗ್ಯಾರಂಟಿ ಯೋಜನೆಯಲ್ಲಿ ಗೃಹ ಜ್ಯೋತಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತವಾಗಿದೆ. ಇದೀಗ ಗೃಹ ಜ್ಯೋತಿ ಯೋಜನೆ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಆ ಬಗ್ಗೆ ಮುಂದೆ ಓದಿ.
ಈ ಕುರಿತಂತೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಂಡಿದ್ದು, ಗೃಹ ಜ್ಯೋತಿ ( Gruha Jyothi Scheme ) ಗ್ರಾಹಕರಿಗೆ ಸಿಹಿಸುದ್ದಿ. ಸಿಗಲಿದೆ ಇನ್ನಷ್ಟು ಲಾಭಗಳು ಅಂತ ತಿಳಿಸಿದೆ.
ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಮಾಸಿಕ ಅರ್ಹ 48 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ಉಚಿತವಾಗಿ ( 10 Unit Electricity Free ) ನೀಡುವುದಾಗಿ ತಿಳಿಸಿದೆ.
ಸರಾಸರಿ 48 ಯೂನಿಟ್ ಗಿಂತ ಕಡಿಮೆ ಬಳಸುವ ಸುಮಾರು 70 ಲಕ್ಷ ಗ್ರಾಹಕರಿಗೆ ಇದರಿಂದ ಪ್ರಯೋಜನ ಸಿಗಲಿದೆ ಎಂಬುದಾಗಿ ಹೇಳಿದೆ.
ರಾಜ್ಯ ಸರ್ಕಾರದ ನಿರ್ಧಾರದಿಂದ ಅತ್ಯಂತ ಕಡಿಮೆ ವಿದ್ಯುತ್ ಬಳಸುವ ಗ್ರಾಹಕರಿಗೆ ಇನ್ಮುಂದೆ ಸಂಪೂರ್ಣ ಶೂನ್ಯ ಬಿಲ್ ಬರಲಿದೆ. ರಾಜ್ಯ ಸರ್ಕಾರ ಇದಕ್ಕೆ ವಾರ್ಷಿಕ 398 ಕೋಟಿ ರೂ.ಗಳ ಹೆಚ್ಚುವರಿ ಸಹಾಯಧನ ನೀಡಲಿದೆ ಎಂಬುದಾಗಿ ಇಂಧನ ಇಲಾಖೆ ತಿಳಿಸಿದೆ.
ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿಯು ಒಂದು. ಈ ಯೋಜನೆಯನ್ವಯ ಪ್ರತಿ ಮನೆಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಇದೀಗ ರಾಜ್ಯ ಸರ್ಕಾರ ಗೃಹಜ್ಯೋತಿ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದೆ.#gruhajyothi #gruhajyothischeme #guaranteescheme@CMofKarnataka @siddaramaiah… pic.twitter.com/AVo6DzWiUU
— DIPR Karnataka (@KarnatakaVarthe) March 1, 2024
‘FSL’ ವರದಿ ಆಧರಿಸಿ ಪಾಕ್ ಪರ ಘೋಷಣೆ ಕೂಗಿದ್ದವರ ವಿರುದ್ಧ ಕಠಿಣ ಕ್ರಮ : ಸಿಎಂ ಸಿದ್ದರಾಮಯ್ಯ ಹೇಳಿಕೆ
BREAKING:ದೇವಾಲಯದ ಜೀರ್ಣೋದ್ಧಾರ ವಿವಾದ: ಜ್ಞಾನವಾಪಿ ಸಮಿತಿಯ ಮನವಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ