ಬೆಂಗಳೂರು: ನಟ ದರ್ಶನ್ ವಿರುದ್ಧ ಬಂದಂತ ದೂರಿನ ಹಿನ್ನಲೆಯಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಿನ್ನೆಯಷ್ಟೇ ನಾನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ನಟ ದರ್ಶನ್ ವಿರುದ್ಧ ದೂರು ಬಂದ ಹಿನ್ನಲೆಯಲ್ಲಿ ನೋಟಿಸ್ ನೀಡಲಾಗಿದೆ ಎಂದರು.
ನಟ ದರ್ಶನ್ ಸಾರ್ವಜನಿಕವಾಗಿ ಅಂತಹ ಶಬ್ದ ಪ್ರಯೋಗಿಸಬಾರದಾಗಿತ್ತು. ಹೆಣ್ಣುಮಕ್ಕಳನ್ನು ಅವಳು, ಇವಳು ಎಂಬುದಾಗಿ ಶಬ್ದ ಪ್ರಯೋಗಿಸಿ ಕರೆಯಬಾರದು. ನಟ ದರ್ಶನ್ ಅಹೇಳನಕಾರಿಯಾಗಿ ಮಾತನಾಡಿದ್ದಾರೆ. ಹೀಗಾಗಿ ಅವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ