ಹಾಸನ: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ.
ಇಂದು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ತಕ್ಷಣದಲ್ಲಿ ಮಾಡಲಾಗುವುದು. ಎಲ್ಲರೂ ಒಗ್ಗಟ್ಟಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲವಿರುವುದಿಲ್ಲ ಎಂದರು.
ಕಾಂತರಾಜು ವರದಿಯನ್ನು ಕೆಲವು ಸ್ವಾಮೀಜಿಗಳು ಹಾಗೂ ಪಕ್ಷದ ಕೆಲ ನಾಯಕರೇ ವಿರೋಧಿಸುತ್ತಿರುವ ಬಗ್ಗೆ ಉತ್ತರಿಸಿ, ಜಾತಿಗಣತಿ ವರದಿಯನ್ನು ಸ್ವೀಕರಿಸಲಾಗಿದೆ. ಆದರೆ ವರದಿಯಲ್ಲಿರುವ ಅಂಶಗಳ ಬಗ್ಗೆ ಮಾಹಿತಿಯಿಲ್ಲ. ಸದರಿ ವರದಿಯನ್ನು ಸಚಿವಸಂಪುಟದ ಮುಂದೆ ಇರಿಸಿ ಚರ್ಚಿಸಲಾಗುವುದು ಎಂದರು. ಎಲ್ಲರ ಅಭಿಪ್ರಾಯವನ್ನು ಪಡೆದೇ ವರದಿಯನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ, ಆದರೆ ಈ ಬಗ್ಗೆ ಸರಿಯಾದ ಮಾಹಿತಿ ಇಲ್ಲ ಎಂದರು.
ವಿರೋಧಪಕ್ಷದವರು ಅಧಿವೇಶನವನ್ನು ಬಹಿಷ್ಕರಿಸಿ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಇತ್ತೀಚೆಗೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಯವರು ಒಬ್ಬರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ , ಮತ್ತೊಬ್ಬರು ಗೈರಾಗಿದ್ದರು. ಇದನ್ನು ಮುಚ್ಚಿಹಾಕಲು ಈ ರೀತಿ ಮಾಡುತ್ತಿದ್ದಾರೆ. ಪಕ್ಷವು ಮಾಡಿಕೊಂಡಿರುವ ಮೈತ್ರಿಯನ್ನು ಶಾಸಕರೇ ಒಪ್ಪಿರುವುದಿಲ್ಲ. ಜೆಡಿಎಸ್ ಅವರು ಜಾತ್ಯಾತೀತರಾಗಿದ್ದು, ಕೋಮುವಾದಿಗಳೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದರು ಎಂದು ತಿಳಿಸಿದರು.
ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯಲ್ಲಿ ಸಿಎಂ ರಾಜಕೀಯ ಭಾಷಣ ಮಾಡುತ್ತಾರೆ ಎಂಬ ಪ್ರತಿಪಕ್ಷಗಳ ಮಾತಿಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷ ಪ್ರಾರಂಭಿಸಿದ್ದ ಹಲವು ಕಾರ್ಯಕ್ರಮಗಳನ್ನ ಜೆಡಿಎಸ್ ಹಾಗೂ ಬಿಜೆಪಿಯವರು ಉದ್ಘಾಟನೆ ಮಾಡಿದ್ದಾರೆ. ಸರ್ಕಾರದಲ್ಲಿ ಇದು ನಿರಂತರ ಪ್ರಕ್ರಿಯೆ. ಸರ್ಕಾರಿ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡುವುದನ್ನು ಪ್ರಧಾನಿ ಮೋದಿಯವರಿಂದಲೇ ಕಲಿತಿದ್ದು. ಅವರು ಸಂಸತ್ ಭವನದಲ್ಲಿ ರಾಜಕೀಯ ಭಾಷಣ ಮಾಡುತ್ತಾರೆ ಎಂದರು.
ರಾಜ್ಯ ಸರ್ಕಾರದಿಂದ ‘ಗೃಹ ಜ್ಯೋತಿ ಯೋಜನೆ’ ಫಲಾನುಭವಿಗಳಿಗೆ ಮತ್ತೊಂದು ಗುಡ್ ನ್ಯೂಸ್ | Gruha Jyothi Scheme
ಉದ್ಯೋಗ ವಾರ್ತೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ